ಮೃತದೇಹಗಳ ಮೇಲೆ ಅತ್ಯಾಚಾರ ವಿಕೃತಿ; ಶಿಕ್ಷೆಗೆ ಕಾನೂನು ರೂಪಿಸಲು ಹೈಕೋರ್ಟ್‌ ಶಿಫಾರಸು

Date:

ಮೃತದೇಹಗಳ ಮೇಲಿನ ವಿಕೃತ ಅತ್ಯಾಚಾರಗಳನ್ನು ತಡೆಯಲು ಮತ್ತು ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಅತ್ಯಾಚಾರ ತಡೆ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ಕ್ಕೆ ತಿದ್ದುಪಡಿ ತಂದು, ಮೃತದೇಹಗಳ ಮೇಲೆ ಅತ್ಯಾಚಾರ ಎಸಗುವವರಿಗೂ ಶಿಕ್ಷೆ ನೀಡುವಂತೆ ಕಾನೂನು ರೂಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ತುಮಕೂರಿನ ಯುವತಿಯೊಬ್ಬರನ್ನು ಕಾಮುಕನೊಬ್ಬ ಕೊಲೆ ಮಾಡಿ, ಮೃತದೇಹದ ಮೇಲೆ ಅತ್ಯಾಚಾರ ಎಸಗಿದ್ದ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ವೆಂಕಟೇಶ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠವು ಬುಧವಾರ ತೀರ್ಪು ಪ್ರಕಟಿಸಿದೆ. ಮೃತದೇಹದ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲದ ಕಾರಣ, ಕೊಲೆ ಅಪರಾಧಕ್ಕೆ ಮಾತ್ರ ಜೀವಾವಧಿ ಶಿಕ್ಷೆ ವಿಧಿಸಿದೆ.

ತೀರ್ಪು ನೀಡುವ ವೇಳೆ, ಮೃತದೇಹಗಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿಯೂ ಶಿಕ್ಷೆ ನೀಡುವ ರೀತಿಯಲ್ಲಿ ಕಾನೂನು ರೂಪಿಸಬೇಕು ಎಂದು ಹೇಳಿದೆ. ಈಗಾಗಲೇ, ಇಂಗ್ಲೆಂಡ್, ಕೆನಡಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾದಂತಹ ರಾಷ್ಟ್ರಗಳಲ್ಲಿ ಮೃತದೇಹಗಳ ಮೇಲೆ ವಿಕೃತಿ ಮೆರೆಯುವವರಿಗೆ ಶಿಕ್ಷೆ ನೀಡುವ ಕಾನೂನುಗಳಿವೆ ಎಂಬುದನ್ನು ಪೀಠವು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಗಳ ಶವಾಗಾರಗಳಲ್ಲಿಯೂ ಮಹಿಳೆಯರ ಮೃತ ದೇಹದ ಮೇಲೆ ಅತ್ಯಾಚಾರ ಎಸಗಿರುವ ಘಟನೆಗಳು ನಡೆದಿವೆ. ಇಂಥ ಕೃತ್ಯಗಳ ತಡೆಗಾಗಿ ಶವಾಗಾರಗಳಲ್ಲಿ ಸಿಸಿಟಿವಿ ಅಳವಡಿಸಲು ನ್ಯಾಯಪೀಠ ಶಿಫಾರಸು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...