ಬೀದರ್‌ | ಹೈಕೋರ್ಟ್‌ ಆದೇಶ : ರಸ್ತೆ, ಚರಂಡಿ ನಿರ್ಮಾಣಕ್ಕೆ 1.30 ಕೋಟಿ ಮಂಜೂರು

Date:

2022ರಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದ ಅನ್ವಯ ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ₹1.30 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಹೇಳಿದ್ದಾರೆ.

ಕಮಲನಗರ ತಾಲೂಕು ಕೇಂದ್ರದ ಎಸ್ಸಿ, ಎಸ್ಟಿ ಬಡಾವಣೆಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ₹98.65 ಲಕ್ಷ ಹಾಗೂ ಕಮಲನಗರ ತಾಲೂಕಿನ ಸೋನಾಳ ಗ್ರಾಮದ ಪರಿಶಿಷ್ಟ ಜಾತಿ (ಬಸವನಗರ) ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ₹32.00 ಲಕ್ಷ ಸೇರಿ ಒಟ್ಟು ₹130.65 ಲಕ್ಷ ಅನುದಾನ ಮಂಜೂರಾಗಿದ್ದು, ಈಗಾಗಲೇ ಎರಡು ಕಾಮಗಾರಿಗಳಿಗೆ ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆಯಿಂದ 2024 ಅಕ್ಟೋಬರ್ 3ರಂದು ಟೆಂಡರ್ ಕರೆಯಲಾಗಿದೆ‌ʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಮಲನಗರ ಹಾಗೂ ಸೋನಾಳ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಸದರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆದು 2022 ಡಿಸೆಂಬರ್‌ 5ರಂದು ಆದೇಶವಾಗಿತ್ತು. ಹೈಕೋರ್ಟ್ ಆದೇಶದ ಅನುಸಾರ ಸರ್ಕಾರದಿಂದ 2024ರ ಫೆಬ್ರವರಿ 20ರಂದು 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ಎರಡು ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಿದೆʼ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಜನಸಾಮಾನ್ಯರು ಕೂಡ ತಮ್ಮ ಮೂಲಭೂತ ಸೌಲಭ್ಯ ಪಡೆಯಲು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಸರ್ಕಾರದಿಂದ ಅನುದಾನ ಪಡೆಯಬಹುದಾಗಿದೆ ಎಂದು ಗುರುನಾಥ ವಡ್ಡೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...