ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣಕ್ಕೆ ಹೈಕೋರ್ಟ್ ತಡೆ

Date:

  • ಸುಬ್ಬಮ್ಮ ಎಂಬುವರು ಸುಧಾಕರ್‌ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು
  • ಪ್ರಕರಣ ರದ್ದು ಕೋರಿ ಸಚಿವ ಡಿ. ಸುಧಾಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು

ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಮತ್ತು ಭೂಹಗರಣ ಆರೋಪ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ತಡೆ ನೀಡಿದ್ದು, ಈ ಮೂಲಕ ಸಚಿವ ಸುಧಾಕರ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಸುಬ್ಬಮ್ಮ ಎಂಬುವರು ಸುಧಾಕರ್‌ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ದೂರಿನ ಮೇರೆಗೆ ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ಪ್ರಕರಣ ರದ್ದು ಕೋರಿ ಸುಧಾಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಧಾರವಾಡ ಹೈಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆ ನಡೆದು, ಪ್ರಕರಣಕ್ಕೆ ಕೋರ್ಟ್ ತಡೆ ನೀಡಿದೆ. ಹಾಗೆಯೇ ಈ ಬಗ್ಗೆ ಸರ್ಕಾರಕ್ಕೆ ತುರ್ತು ನೋಟಿಸ್ ನೀಡಿ ವಿಚಾರಣೆಯನ್ನು ಅಕ್ಟೋಬರ್ ​3ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಧಾಕರ್‌ ಪ್ರತಿಕ್ರಿಯೆ

“ನನ್ನ ವಿರುದ್ಧದ ಪ್ರಕರಣ ರದ್ದತಿಗೆ ಅರ್ಜಿ ಸಲ್ಲಿಸಿದ್ದೆವು. ನನ್ನ ವಿರುದ್ಧದ ಪ್ರಕರಣಕ್ಕೆ ಇಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದ್ದು, ನಮ್ಮ ವಕೀಲರಿಂದ ಈಗ ಮಾಹಿತಿ ಸಿಕ್ಕಿದೆ. ತಡೆಯಾಜ್ಞೆಯ ದಾಖಲೆ ನಮ್ಮ ವಕೀಲರ ಬಳಿ ಇದೆ” ಎಂದು ಸುಧಾಕರ್‌ ಚಿತ್ರದುರ್ಗದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

ಪ್ರಕರಣದ ಹಿನ್ನೆಲೆ

ಡಿ. ಸುಧಾಕರ್​ ಪಾಲುದಾರರಾಗಿರುವ ಸೆವೆನ್ ಹಿಲ್ಸ್ ಡೆವಲಪರ್ಸ್ ಅಂಡ್​ ಟ್ರೇಡರ್ಸ್ ರಿಯಲ್​ ಎಸ್ಟೆಟ್​ ಕಂಪನಿ 2003 ರಲ್ಲಿ ಸುಬ್ಬಮ್ಮ ಎಂಬುವರಿಂದ ಯಲಹಂಕದ ಸರ್ವೆ ನಂಬರ್​ 108/1ರ ಜಮೀನನ್ನು ಕೊಂಡುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಜಮೀನಿಗೆ ಇದ್ದ ಬೆಲೆಯನ್ನು ಸುಬ್ಬಮ್ಮ ಅವರಿಗೆ ಕಂಪನಿ ನೀಡುತ್ತದೆ. ಮತ್ತು ಕ್ರಯಪತ್ರ ಮಾಡಿಕೊಂಡಿದೆ.

ಆದರೆ, ಇದೀಗ ಸುಬ್ಬಮ್ಮ ಅವರು ಅಂದು ಮಾರಿದ ಜಮೀನಿಗೆ ಇಂದಿನ ಬೆಲೆಗೆ ಹಣ ನೀಡಿ ಎಂದು ಡಿ. ಸುಧಾಕರ್​ ಅವರ ಬಳಿ ಬಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ 11 ಜನರು ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸುಬ್ಬಮ್ಮ ಮತ್ತು ಡಿ.ಸುಧಾಕರ್​ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ನಂತರ ಸುಬ್ಬಮ್ಮ ಅವರು ಸೆ.10 ರಂದು ಬೆಂಗಳೂರಿನ ಯಲಹಂಕ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...