ಬೀದರ್‌ | ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ : ಯುವ ರೈತನ ಕೈಹಿಡಿದ ಚೆಂಡು ಹೂವು ಕೃಷಿ

Date:

ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಯುವ ರೈತರೊಬ್ಬರು ತಮ್ಮ ಹೊಲದಲ್ಲಿಚೆಂಡು ಹೂ ಬೆಳೆದಿದ್ದು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಅಹಮದಾಬಾದ್‌ ಗ್ರಾಮದ ಯುವ ರೈತ ಅಮರ್‌ ಸಿಂಧೆ ತಮ್ಮ ಒಂದುವರೆ ಎಕರೆ ಪ್ರದೇಶದಲ್ಲಿ ಚೆಂಡು ಹೂವು ಬೆಳೆದಿದ್ದಾರೆ. ಚೆಂಡು ಹೂವು ಹುಲುಸಾಗಿ ಬೆಳೆದಿದ್ದು, ಒಂದು ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದಾರೆ.

WhatsApp Image 2024 10 30 at 5.54.20 PM

ಚಂಡು ಬೆಳೆಯಲು ಭೂಮಿ ಹದ, ಔಷಧಿ ಸಿಂಪಡಣೆ, ಸಾವಯವ ಗೊಬ್ಬರ ಸೇರಿದಂತೆ ಇನ್ನಿತರ ಸೇರಿ ಒಟ್ಟು ₹70 ಸಾವಿರ ಖರ್ಚಾಗಿದೆ. 90 ದಿನಗಳ ಬೆಳೆಯಾದ ಈ ಚೆಂಡು ಹೂವು ಬೀಜವನ್ನು ಹಾಕುವ ಮೂಲಕ ದಸರಾ ಹಾಗೂ ದೀಪಾವಳಿ ಹಬ್ಬಕ್ಕೆ ಬರುವಂತೆ ಬೆಳೆ ಬೆಳೆಯಲಾಗುತ್ತದೆ. ಆಗಸ್ಟ್‌ 1ರಂದು ನಾಟಿ ಮಾಡಲಾಗಿತ್ತು. ಈಗಾಗಲೇ ದಸರಾ ಸಮಯದಲ್ಲಿ 20 ಕ್ವಿಂಟಲ್ ಕಟಾವು ಮಾಡಿ ಮಾರಾಟ ಮಾಡಿದ್ದೇನೆ.ಇದರಿಂದ ನಾನು ಖರ್ಚು ಮಾಡಿದ ಹಣ ನನ್ನ ಕೈಸೇರಿದೆ ಎನ್ನುತ್ತಾರೆ ಅಮರ್‌ ಸಿಂಧೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಹಾರಾಷ್ಟ್ರದ ಶಹಜಾನಿ ಔರಾದದಿಂದ ಅಷ್ಟಗಂಧ ತಳಿಯ 9 ಸಾವಿರ ಬೀಜ ಖರೀದಿಸಲಾಗಿದೆ. 3-4 ರೂಪಾಯಿಗೆ ಒಂದರಂತೆ ಖರೀದಿಸಿ ತಂದು ನಾಟಿ ಮಾಡಲಾಗಿದೆ. ದಸರಾ ಸಮಯದಲ್ಲಿ ಒಟ್ಟು 20 ಕ್ವಿಂಟಲ್‌ ಕಟಾವು ಮಾಡಿದ್ದೇನೆ. ಇದೀಗ ದೀಪಾವಳಿ ಹಬ್ಬವಿದೆ, ಇನ್ನು ಎರಡು ಬಾರಿ ಕಟಾವು ಮಾಡಲಾಗುತ್ತದೆ. ಒಟ್ಟು 45 ಕ್ವಿಂಟಲ್‌ವರೆಗೆ ಇಳುವರಿ ಬರುವ ನಿರೀಕ್ಷೆಯಿದೆ. ಸದ್ಯ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹50 ರಿಂದ ₹60 ಕೆ.ಜಿ. ಮಾರಾಟ ಆಗುತ್ತಿದೆʼ ಎಂದು ಹೇಳಿದರು.

ಮಾರುಕಟ್ಟೆ :

ʼನಾನು ಬೆಳೆದ ಚೆಂಡು ಹೂವು ಬೆಳೆದು ತೆಲಂಗಾಣದ ಹೈದರಾಬಾದ್‌  ಮಾರುಕಟ್ಟೆಗೆ ಸಾಗಾಟ ಮಾಡುತ್ತೇನೆ. ಸ್ಥಳೀಯ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೆಲೆ ಸಿಗುವುದಿಲ್ಲ. ಹೀಗಾಗಿ ಯಾವಾಗಲೂ ಹೈದ್ರಾಬಾದ್‌ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. ಹೀಗಾಗಿ ವಾಹನ ಸಾಗಾಟ ಖರ್ಚು ಅಧಿಕ ಬರುತ್ತಿದೆ. ಇದೀಗ ದೀಪಾವಳಿ ಹಬ್ಬದಲ್ಲಿ ಉತ್ತಮ ಬೆಲೆ ದೊರೆತರೆ ಆದಾಯ ಸಿಗಬಹುದು” ಎಂದು ಹೂವು ಬೆಳೆಗಾರ ಅಮರ್‌ ಶಿಂಧೆ ʼಈ ದಿನ.ಕಾಮ್‌ʼ ಜೊತೆಗೆ ಮಾತನಾಡಿ ಖುಷಿ ಹಂಚಿಕೊಂಡಿದ್ದಾರೆ.

ಐದು ವರ್ಷದಿಂದ ಚೆಂಡು ಹೂ ಕೃಷಿ :

ಅಮರ್‌ ಸಿಂಧೆ ಓದಿದ್ದು ಪಿಯುಸಿ, ತದನಂತರ ಓದು ಬಿಟ್ಟು ಕೃಷಿಯತ್ತ ಮುಖ ಮಾಡಿದರು. ಆರು ಎಕರೆ ಸ್ವಂತ ಜಮೀನಿನಲ್ಲಿ ವಿವಿಧ ವಾಣಿಜ್ಯ ಬೆಳೆಗಳ ಕೃಷಿ ಕೈಗೊಳ್ಳುವ ಮೂಲಕ ಹೆಚ್ಚಿನ ಆದಾಯ ಕಂಡುಕೊಂಡು ಮಾದರಿ ರೈತರಾಗಿ ಹೊರಹೊಮ್ಮಿದ್ದಾರೆ.

ಸದ್ಯ ತೋಟದಲ್ಲಿ ಸಮೃದ್ಧವಾಗಿ ಬೆಳೆದ ಕೇಸರಿ ಹಾಗೂ ಹಳದಿ ಬಣ್ಣದ ಚೆಂಡು ಹೂಗಳಿಂದ ಕಂಗೊಳಿಸುತ್ತಿದೆ. ರಸ್ತೆಯಲ್ಲಿ ತೆರಳುವ ಪಾದಚಾರಿ, ವಾಹನ ಸವಾರರಿಗೆ ತನ್ನತ್ತ ಸೆಳೆಯುತ್ತಿದೆ. ಕೆಲವರಂತೂ ಹೂದೋಟಕ್ಕೆ ಭೇಟಿ ನೀಡಿ ಮನದಣಿಸಿಕೊಳ್ಳುತ್ತಿದ್ದಾರೆ.

WhatsApp Image 2024 10 30 at 5.31.48 PM 1
ರೈತ ಅಮರ್‌ ಸಿಂಧೆ

ʼಈ ಹಿಂದೆ ಸೋಯಾಬಿನ್‌, ತೊಗರಿ, ಉದ್ದು ಸೇರಿದಂತೆ ಇತರೆ ಸಾಂಪ್ರದಾಯಿಕ ಬೆಳೆಗಳು ಬೆಳೆಯುತ್ತಿದ್ದರು. ನಾನು ಕೃಷಿಗೆ ತೊಡಗಿಸಿಕೊಂಡ ನಂತರ ಪೂರ್ಣ ವಾಣಿಜ್ಯ ಕೃಷಿ ಮಾಡುತ್ತಿದ್ದೇವೆ. 6 ಎಕರೆಯಲ್ಲಿ ಹೂವು, ಶುಂಠಿ ಸೇರಿದಂತೆ ತರಕಾರಿ ಬೆಳೆಯುತ್ತೇನೆ. ಕಳೆದ ಐದು ವರ್ಷದಿಂದ ಚಂಡು ಹೂ ಬೆಳೆಯುತ್ತಿದ್ದೇನೆ. ಆದರೆ, ತೋಟಗಾರಿಕೆ ಇಲಾಖೆಯಿಂದ ಇಲ್ಲಿಯವರೆಗೆ ಯಾವುದೇ ಸಹಾಯಧನ ಸಿಗಲಿಲ್ಲ. ಹಲವು ಬಾರಿ ತೋಟಗಾರಿಕೆ ಇಲಾಖೆಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಮಾಹಿತಿ ನೀಡಿದ್ದೇನೆ. ಯಾವುದೇ ಯೋಜನೆಗಳಿಲ್ಲ ಎಂದು ಅಧಿಕಾರಿಗಳು ವಾಪಸ್ ಕಳಿಸಿದ್ದಾರೆ. ಹೀಗಾಗಿ ಸ್ವಂತ ಖರ್ಚಿನಲ್ಲೇ ಎಲ್ಲಾ ಬೆಳೆ ಬೆಳೆಯುತ್ತೇನೆʼ ಎಂದು ಅಮರ್‌ ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ತೋಟಗಾರಿಕೆ ಕೃಷಿ ಮಾಡುವವರಿಗೆ ಇಲಾಖೆಯಿಂದ ಹಲವಾರು ಯೋಜನೆಗಳಿದ್ದರೂ ಪ್ರಗತಿಪರ ಯುವ ರೈತರಿಗೆ ದಕ್ಕದೇ ಇರುವುದು ವಿಪರ್ಯಾಸವೇ ಸರಿ. ಸಂಬಂಧಪಟ್ಟ ಅಧಿಕಾರಿಗಳು ಇಂಥ ಯುವ ರೈತರಿಗೆ ಸೂಕ್ತ ಮಾರ್ಗದರ್ಶನ ಒದಗಿಸಿದರೆ ಕೃಷಿಯಲ್ಲಿ ಹೆಚ್ಚಿನ ಜನರು ತೊಡಗಿಸಿಕೊಳ್ಳಲು ಸಾಧ್ಯ ಎನ್ನುವುದು ರೈತರ ಅಭಿಪ್ರಾಯ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...