ಮಂಗಳೂರು ಗುಂಪು ಹತ್ಯೆ | ಹಿಂದೂ ಯುವಕರ ವಿರುದ್ಧ ಸುಳ್ಳು ಕೇಸು: ಆರೋಪಿಗಳ ಪರ ನಿಂತ ಬಿಜೆಪಿ ಶಾಸಕ!

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕ ಅಶ್ರಫ್‌ನ ಗುಂಪು ಹತ್ಯೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ. ಭರತ್ ಶೆಟ್ಟಿ, “ಕುಡುಪು ಬಳಿ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಈ ಕೇಸಿನಲ್ಲಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳುವ ಮೂಲಕ ಆರೋಪಿಗಳ ಪರ ನಿಂತಿದ್ದಾರೆ.

ಕೇರಳದ ವಯನಾಡ್‌ ಮೂಲಕ ಯುವಕ ಅಶ್ರಫ್‌ನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಏಪ್ರಿಲ್ 27ರಂದು ಭಾನುವಾರ ಕ್ರಿಕೆಟ್‌ ಮೈದಾನದಲ್ಲಿ ಹೊಡೆದು ಹತ್ಯೆಗೈದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 20 ಮಂದಿ ಆರೋಪಿಗಳನ್ನು ಈವರೆಗೆ ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಭರತ್ ಶೆಟ್ಟಿ, “ಕುಡುಪು ಬಳಿ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಈ ಕೇಸಿನಲ್ಲಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ. ಮಾತ್ರವಲ್ಲ ರಾಜಕೀಯ ಒತ್ತಡವನ್ನೂ ಪೊಲೀಸರ ಮೇಲೆ ಹಾಕಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರು ತನಿಖೆ ಮಾಡುವ ನೆಪದಲ್ಲಿ ಎಳೆದುಕೊಂಡು ಹೋಗಿ ಪ್ರಕರಣವನ್ನು ಬಲವಂತವಾಗಿ ಒಪ್ಪಿಕೊಳ್ಳುವಂತೆ ಬೆದರಿಸಲಾಗುತ್ತಿದೆ. ಇದೀಗ ಕೆಲವು ಸಂಘಟನೆಗಳು, ಪಕ್ಷಗಳು ಪ್ರತಿಭಟನೆ ಮಾಡುವುದರ ಹಿಂದೆ ರಾಜಕೀಯ ತಂತ್ರವಿದ್ದು, ಪೊಲೀಸ್ ಇಲಾಖೆ ಆಡಳಿತ ಪಕ್ಷದ ರಾಜಕೀಯ ಕೈಗೊಂಬೆಯಂತೆ ವರ್ತಿಸುತ್ತಿದೆ. ವಿನಾಕಾರಣ ಹಿಂದೂ ಯುವಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದ್ದು, ಪೊಲೀಸ್ ಠಾಣೆಗೆ ಘೆರಾವ್ ಹಾಕಬೇಕಾಗುತ್ತದೆ” ಎಂದು ಬೆದರಿಕೆ ಕೂಡ ಹಾಕಿದ್ದಾರೆ.

“ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದೇಶದ್ರೋಹಿಗಳಿಗೆ ರಾಜಮರ್ಯಾದೆ ದೊರಕುತ್ತಿದೆ. ಅದೇ ದೇಶಪ್ರೇಮಿಗಳನ್ನು ಅಪರಾಧಿಗಳಂತೆ ತೋರಿಸಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಲು ಬೆದರಿಕೆ ತಂತ್ರ ಅನುಸರಿಸಲಾಗುತ್ತಿದೆ” ಎಂದು ಶಾಸಕ ಭರತ್ ಶೆಟ್ಟಿ, ಘಟನೆಯನ್ನು ಖಂಡಿಸುವುದರ ಬದಲು ಆರೋಪಿಗಳ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಗುಂಪು ಹತ್ಯೆ | ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬೆವರಿಳಿಸಿದ ಪತ್ರಕರ್ತರು!

ಶಾಸಕನಿಂದ ಪ್ರಕರಣ ಮುಚ್ಚಿ ಹಾಕಲು ಒತ್ತಡ: ಆರೋಪ

“ಬಿಜೆಪಿಯವರ ಪ್ರಚೋದನೆಯೇ ಇಂತಹ ಘಟನೆಗೆ ಕಾರಣ. ಸುಮಾರು 40ಕ್ಕೂ ಅಧಿಕ ಮಂದಿಯಿದ್ದ ಗ್ರೂಪಿಗೆ ಸ್ಥಳೀಯ ಬಿಜೆಪಿ ಮುಖಂಡ ಪಿಸ್ತೂಲ್ ರವಿ ಎಂಬಾತನೇ ಪ್ರಚೋದನೆ ನೀಡಿದವ. ಆತ ಶಾಸಕ ಭರತ್ ಶೆಟ್ಟಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರಿಗೆ ಸರಿಯಾದ ಮಾಹಿತಿ ಇದ್ದರೂ, ‘ಅಪರಿಚಿತ ಶವ ಪತ್ತೆ’ ಎಂದು ತಿಳಿಸಿ ಶಾಸಕರ ಮೂಲಕ ಪ್ರಕರಣ ಮುಚ್ಚಿ ಹಾಕಲು ಒತ್ತಡ ತಂದಿದ್ದರು” ಎಂಬ ಆರೋಪ ಕೇಳಿಬಂದಿರುವ ನಡುವೆಯೇ ಬಿಜೆಪಿ ಶಾಸಕ ಭರತ್ ಶೆಟ್ಟಿ ಈ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...