ಉಡುಪಿ | ‘ಹಿಂದೂಗಳ ಸಂತತಿ ಹೆಚ್ಚಾಗಲು ಕನಿಷ್ಠ ನಾಲ್ಕು ಮಕ್ಕಳು ಹೆರಬೇಕು’ ಎಂದ ಕಾಳಹಸ್ತೇಂದ್ರ ಸ್ವಾಮೀಜಿ!

Date:

ಹಿಂದೂಗಳು ಸಂತತಿಯನ್ನು ಹೆಚ್ಚಿಸಿಕೊಳ್ಳಬೇಕು. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಅವರು ಬಾಂಗ್ಲಾ ಹಿಂದೂಗಳ ಮೇಲೆ ದೌರ್ಜನ್ಯ ಎಸೆಗಲಾಗುತ್ತದೆ ಎಂದು ಬುಧವಾರ ಉಡುಪಿಯಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿದ ವೇಳೆ ಈ ಹೇಳಿಕೆ ನೀಡಿದ್ದಾರೆ.

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ದಯನೀಯ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಮುಂದೆ ಭಾರತದಲ್ಲಿಯೂ ಈ ಸ್ಥಿತಿ ಬಾರದಂತೆ ಮಾಡಲು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಿದೆ. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು” ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿಯವರು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾತೆಯರು ಅಷ್ಟ ಮಕ್ಕಳನ್ನು ಹೆತ್ತು ಹಿಂದೂ ರಾಷ್ಟ್ರಕ್ಕೆ ಕೊಡುಗೆ ನೀಡಬೇಕು, ಕಡೆಯ ಪಕ್ಷ ಕನಿಷ್ಠ ನಾಲ್ಕು ಮಕ್ಕಳಿಗಾದರೂ ಜನ್ಮ ನೀಡಬೇಕೆಂದು ಮನವಿ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಜಂಗಲ್ ರಾಜ್ ಸರಕಾರ ಅಸ್ತಿತ್ವದಲ್ಲಿದೆ. ಅಂತಾರಾಷ್ಟ್ರೀಯ ಸಂಘಟನೆಗಳ ಮೂಲಕ ಒತ್ತಡವನ್ನು ಹೇರಿ, ಅಲ್ಲಿನ ಹಿಂದೂಗಳನ್ನು ರಕ್ಷಿಸುವ ಹೊಣೆಯನ್ನು ಕೇಂದ್ರ ಸರಕಾರ ಹೊರಬೇಕು. ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ರಕ್ಷಣೆ ಸಿಗುವವರೆಗೆ ಆ ದೇಶದ ಜೊತೆಗೆ ಯಾವುದೇ ರೀತಿಯ ವ್ಯಾಪಾರ, ಕ್ರಿಕೆಟ್ ಪಂದ್ಯಾಟಗಳನ್ನು ನಡೆಸುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ತಾಳಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಪ್ರತಿಯೊಬ್ಬ ಹಿಂದೂ ಬಾಂಗ್ಲಾದೇಶದಲ್ಲಿನ ಹಿಂದೂವನ್ನು ರಕ್ಷಿಸುವಂತೆ ಆಗ್ರಹಿಸಿ, ಪೋಸ್ಟ್ ಕಾರ್ಡ್ ಬರೆದು ಕೇಂದ್ರ ಸರಕಾರಕ್ಕೆ ಕಳುಹಿಸಬೇಕು. ಸಾಮಾಜಿಕ ಜಾಲತಾಣವನ್ನು ಪ್ರಬಲವಾಗಿ ಬಳಸಿ ಸೇವ್ ಬಾಂಗ್ಲಾ ಹಿಂದೂ ಎಂಬ ಅಭಿಯಾನವನ್ನು ಆರಂಭಿಸಬೇಕು ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಎರಡು ತಿಂಗಳ ಹಿಂದೆಯೇ ಈ ಪ್ರತಿಭಟನೆ ನಡೆಯಬೇಕಿತ್ತು. ಬಾಂಗ್ಲಾದೇಶದಲ್ಲಿನ ಘಟನೆಗಳಿಗೆ ನಾವು ಸ್ಪಂದಿಸಬೇಕೆಂದು ಹಿಂದೂಗಳಿಗೆ ತಡವಾಗಿ ಅರಿವಾಗಿರುವುದು ಸರಿಯಲ್ಲ. ಹಿಂದೂಗಳಿಗೆಂದು ಇರುವ ಜಗತ್ತಿನ ಏಕೈಕ ದೇಶ ಭಾರತ. ಇಂದಿನ ಸಭೆಗೂ ಪೂರ್ಣವಾಗಿ ಹಿಂದೂಗಳು ಭಾಗವಹಿಸಿಲ್ಲ ಎಂದವರು ವಿಷಾದಿಸಿದ ಪ್ರಸಂಗ ಕೂಡ ನಡೆಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...