ಉಡುಪಿ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತ ಉದ್ಯೋಗಾರ್ಥಿಗಳನ್ನು ಹುಡುಕುವ ಪ್ರಯತ್ನ : ಮೇಘಚಂದ್ರ

Date:

ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶದ ವತಿಯಿಂದ ಇಂದು ಹಿರಿಯಡಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ʼಉದ್ಯೋಗ ಮೇಳʼ ಆಯೋಜಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಯುನೈಟೆಡ್‌ ಟೊಯೋಟಾದ ಕ್ಲಸ್ಟರ್‌ ಹೆಡ್‌ ಶರಣ್‌ ಜೋಸ್‌ ಅಮ್ಮಣ್ಣ ಮತ್ತು ಅಸಿಸ್ಟೆಂಟ್‌ ಮ್ಯಾನೇಜರ್, ಹೆಚ್‌.ಆರ್‌ ಮೇಘಚಂದ್ರ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ ಇವರು ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ ಇವರು ಸ್ವಾಗತಿಸಿ, ಶ್ರೀಮತಿ ಅಪರ್ಣ ಕೆ ಯು ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಶ್ರೀ ನಂದೀಶ್‌ ಕುಮಾರ್‌ ಕೆ ಸಿ ಇವರು ವಂದಿಸಿದರು.

ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಿಶ್ಚಿತ ಎಸ್‌ ಹೋಬಳಿದಾರ್‌ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಉದ್ಯೋಗಾರ್ಥಿಗಳಿಗಾಗಿ ಸಂದರ್ಶನಗಳನ್ನು ನಡೆಸಿದ ನಂತರ ಕಾಲೇಜಿನ ಸಿಬ್ಬಂದಿ ವರ್ಗದವರಿಗೆ ಕೆಲವು ಚಟುವಟಿಕೆಗಳ ಮೂಲಕ ಮನರಂಜಿಸಿದರು. ನಂತರ ಯುನೈಟೆಡ್‌ ಟೊಯೋಟಾದ ವತಿಯಿಂದ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...