ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

Date:

ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್‌ ತೆರಳುವ ತೆಪ್ಪ ಸಂಚಾರ ಸ್ಥಗಿತಗೊಳಿಸಿದ್ದರು.

ಇದರಿಂದಾಗಿ ಹೊಗೇನಕಲ್ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ತೊಂದರೆ ಆಗುತ್ತಿರುವುದನ್ನು ಮನಗಂಡ ಎರಡು ರಾಜ್ಯಗಳ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಸಮಸ್ಯೆ ಆಲಿಸಿದರು.

ತಮಿಳುನಾಡು ಪೆರುಣಾಗಂ ಪೊಲೀಸ್ ಠಾಣೆ ಡಿವೈಎಸ್ಪಿ ರಾಜಸುಂದರಂ,ಇನ್ಸ್ಪೆಕ್ಟರ್ ಮುರುಳಿ, ಗೋಪಿನಾಥಮ್ ಅರಣ್ಯ ವಲಯ ಡಿಆರ್‌ಫ್ಓ ದಿನೇಶ್, ಉಪ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿಗಳು ತೆಪ್ಪಗಾರರ ಜೊತೆ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 31 at 2.33.36 PM

ನದಿಯಲ್ಲಿ ಒಂದು ಕರ್ನಾಟಕದ ಕಡೆಯಿಂದ ತಮಿಳುನಾಡು ಗಡಿ ಕಡೆಗೆ ಕರೆದುಕೊಂಡು ಹೋಗಲು, ಪ್ರವಾಸಿಗರನ್ನು ಮತ್ತೆ ಕರೆತರಲು ಯಾವುದೇ ಅಡ್ಡಿ ಇಲ್ಲ. ಆಯಕಟ್ಟಿನ ಪ್ರದೇಶವಾಗಿದ್ದು, ಇಲ್ಲಿ ಈಜುವುದು, ಸೆಲ್ಫಿ ಇದ್ಯಾವುದಕ್ಕೂ ಆಸ್ಪದ ಇಲ್ಲ. ಪ್ರವಾಸಿಗರ ಕ್ಷೇಮ ಮುಖ್ಯವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ಇದರಿಂದ ಸಮಾಧಾನಗೊಂಡ ತೆಪ್ಪಗಾರರು ಹೊಗೇನಕಲ್ ಫಾಲ್ಸ್ ವೀಕ್ಷಣೆಗೆ ಸಂಚಾರ ಆರಂಭ ಮಾಡಿದ್ದಾರೆ. ಮೂಲಕ ಜಂಟಿ ಪೊಲೀಸ್ ಸಭೆ ಯಶಸ್ವಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...