ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನೌಕರರ ಸಮ್ಮಿಲನ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರು ಸಮಾಜದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಸಂಘಟಿತ ಶಕ್ತಿಯ ಮೂಲಕ ತಮ್ಮ ಹಕ್ಕುಗಳ ಸಾಧನೆ ಸಾಧ್ಯವೆಂದು ಹೇಳಿದರು. ಶಿಕ್ಷಣ ಮತ್ತು ಸೇವಾಭಾವದ ಮೂಲಕ ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸಬೇಕು ಎಂದು ಭಾಗವಹಿಸಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಸೈಟ್ ಹೋರಾಟ: ನ್ಯಾಯಾಲಯ ಮಹತ್ವದ ಆದೇಶ
ಈ ವೇಳೆ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಶಾಸಕರಾದ ಶಿವಲಿಂಗೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಹಾಗೂ ಸಮಿತಿಯ ಮುಖ್ಯಸ್ಥರು, ಸದಸ್ಯರು ಉಪಸ್ಥಿತರಿದ್ದರು.





