ಬೀದರ್‌ : ಸತತ ಮಳೆ : ಜಿಲ್ಲೆಯಲ್ಲಿ ಎಲ್ಲ ಶಾಲೆಗಳಿಗೆ ನಾಳೆ ರಜೆ ಘೋಷಣೆ

Date:

ಜಿಲ್ಲೆಯಲ್ಲಿ‌ ಶನಿವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೊರಗೆ ಬಿಡದೇ ದೋ ಅಂತ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಕೆಲವೆಡೆ ನದಿ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ವಿವಿಧ ತಾಲೂಕಿನಲ್ಲಿ 38 ಮನೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆ ಸೋಮವಾರ ಕೂಡ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ (ಸೆ.2) ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಸಲೀಂ ಪಾಷಾ ಆದೇಶ ಹೊರಡಿಸಿದ್ದಾರೆ.

ʼಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನೂಕುಲವಾಗುತ್ತಿರುವ ಪ್ರಯುಕ್ತ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಒಂದು ದಿನದ ರಜೆ ಘೋಷಿಸಲಾಗಿದೆʼ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...