ರಾಯಚೂರು | ಸಿಎಂ ಭೇಟಿ ವೇಳೆ ಒಳಮೀಸಲಾತಿ ಹೋರಾಟಗಾರ ಎಸ್ ಮಾರೆಪ್ಪನವರಿಗೆ ಗೃಹ ಬಂಧನ: ಖಂಡನೆ

Date:

ರಾಯಚೂರು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿಯವರಿಗೆ ಮುತ್ತಿಗೆ ಹಾಕಲು, ಒಳಮೀಸಲಾತಿ ಜಾರಿಗೆ ಹೋರಾಟ ಮಾಡುವುದಾಗಿ ಹೇಳಿದ್ದರಿಂದ ಹಿರಿಯ ಹೋರಾಟಗಾರ ಎಸ್.ಮಾರೆಪ್ಪನವರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದರು. ಇದು ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರೆ ಅಪರಾಧವೇ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ ಪ್ರಶ್ನಿಸಿದ್ದಾರೆ.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ಸಾಥ್ ಮೈಲ್ ಕ್ರಾಸ್ ಬಳಿ ಮನವಿ ನೀಡಲಾಗಿದೆ. ಆದರೆ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳಿರುವುದು ಖಂಡನಾರ್ಹ. ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚಿಸಿಯೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿತ್ತು ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿಗೆ ಎಂದು ಬಿಡುಗಡೆ ಮಾಡಿದ್ದರು. ಮತ್ತೆ ಸಂಪುಟದಲ್ಲಿ ಚರ್ಚಿಸಬೇಕು. ಆದರೆ ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಿತಿ ರಚಿಸಿ ಜಾರಿಯಾಗದಂತೆ ನಿರ್ಬಂಧಿಸಿದ್ದಾರೆಯೇ ಎಂಬುದನ್ನು ಮುಖ್ಯಮಂತ್ರಿಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಒಳಮೀಸಲಾತಿ ಕುರಿತಂತೆ ರಾಜ್ಯದ ಮುಖ್ಯಮಂತ್ರಿಗಳು ಸಮುದಾಯದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಕೂಡಲೇ ಜಾರಿಗೆ ಅಡ್ಡಿಯಾಗಿರುವ ಕಾರಣ ಬಹಿರಂಗಪಡಿಸಬೇಕು. ಇಲ್ಲ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಗೆ ಮುನ್ನ ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಒಳಮೀಸಲಾತಿ ಜಾರಿಗೊಳಿಸುವುದು ನಾವೇ ಎಂದು ಹೇಳಿದ್ದರು. ಜನರು ಅಧಿಕಾರ ನೀಡಿ ಸುಪ್ರಿಂಕೋರ್ಟ ಆದೇಶ ನೀಡಿದ್ದರೂ ಜಾರಿಗೆ ಮುಂದಾಗುತ್ತಿಲ್ಲ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.ಮುಂದೆ ನಡೆಯಲಿರುವ ಉಪ ಚುನಾವಣೆ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ಸೇರಿ ಸಮುದಾಯ ಜನರು ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಎಸ್.ಮಾರೆಪ್ಪ ಮಾತನಾಡಿ, ಒಳಮೀಸಲು ಕುರಿತಂತೆ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ನಾಯಕರು ಮಾತನಾಡಬೇಕು. ಸುಪ್ರೀಂ ಕೋರ್ಟ್‌ ತೀಪು ನೀಡಿ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯದಲ್ಲಿ ಶೋಷಿತ ಸಮೂದಾಯಗಳ ದತ್ತಾಂಶ ರಾಜ್ಯದ ಸರ್ಕಾರದ ಬಳಿಯಿದೆ. ಆದರೂ ಕಾಂಗ್ರೆಸ್ ಕರ್ನಾಟಕ ಮತ್ತು ತೆಲಂಗಾಣ ರಾಜ್ಯದಲ್ಲಿ ಜಾರಿಗೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಮಿತಿಗಾಗಿ ಕಾದು ಕುಳಿತಿದೆ. ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳುವ ಬದಲು ಪಕ್ಷದ ವರಿಷ್ಠರ ಸೂಚನೆ ಬಹಿರಂಗಪಡಿಸಬೇಕು ಎಂದರು.

ದೇಶದ 20 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಅಲ್ಲಿ ಜಾರಿ ಕುರಿತು ಬಿಜೆಪಿ ನಾಯಕರು ಮಾತನಾಡಬೇಕು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಬುದ್ದಿ ಕಲಿಸಲು ಮಾದಿಗ ಸಮಾಜದ ಸ್ವತಂತ್ರ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಕಣಕ್ಕಿಸಲು ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೊಪ್ಪಳ | ಶಿಷ್ಟಾಚಾರ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಮಕ್ಕೆ ಶೈಲಜಾ ಹಿರೇಮಠ್ ಒತ್ತಾಯ

ಪೊಲೀಸರು ಹೋರಾಟಕ್ಕೆ ಮುನ್ನವೇ ಗೃಹ ಬಂಧನದಲ್ಲಿರಿಸಿರುವುದು ಪ್ರಜಾಪ್ರಭುತ್ವ, ಹೋರಾಟ ವಿರೋಧಿ ನಡೆಯಾಗಿದೆ. ಜಿಲ್ಲೆ ಎಲ್ಲ ಸಂಘಟನೆಗಳು ಹೋರಾಟಗಾರರನ್ನು ಬಂಧಿಸುವ ಪೊಲೀಸ್ ನಡೆಯನ್ನು ಖಂಡಿಸಬೇಕಿದೆ. ಇಲ್ಲದೇ ಹೋದಲ್ಲಿ ಇಂದು ನನಗಾದ ಅನುಭವ ನಾಳೆ ನಿಮಗೂ ಆಗುವ ದಿನಗಳು ಬರುತ್ತವೆ. ಪೊಲೀಸರು ಸರ್ಕಾರ ಮತ್ತು ಹೋರಾಟಗಳ ಮಧ್ಯೆ ಕೊಂಡಿಯಂತೆ ಕಾರ್ಯನಿರ್ವಹಿಸಬೇಕೇ ಹೊರತು ಹೋರಾಟ ಹತ್ತಿಕ್ಕುವ ಕೆಲಸ ಮಾಡಬಾರದು ಎಂದರು.

ಈ ಸಂದರ್ಭದಲ್ಲಿ ಸಮಿತಿ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ ಕಲವಲದೊಡ್ಡಿ , ಶ್ರೀನಿವಾಸ ಕೊಪ್ಪರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...