ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗೃಹ ಸಚಿವ ಪರಮೇಶ್ವರ್ ಮನವಿ

Date:

ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ   ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ  ಮನವಿ ಮಾಡಿದರು.

 ತುಮಕೂರು ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಾ ಮನವಿ ಮಾಡಿದರು.

ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಜಿಲ್ಲೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20,000 ಎಕರೆ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಕ್ರಮದ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿರುವುದರಿಂದ ಮುಂದೊಂದು ದಿನ ಜಿಲ್ಲೆಯು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000730102

ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲಾಗಿದೆ ಎಂದರು.

 ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 22ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದ್ದು, ಇದಕ್ಕಾಗಿ 474 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಅದೇ ರೀತಿ ಶಕ್ತಿ ಯೋಜನೆಯಡಿ ಜಿಲ್ಲೆಯ 10 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 302 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ಮಾಹೆ 2,000 ರೂ.ಗಳಂತೆ 1673 ಕೋಟಿ ರೂ. ಜಮೆ ಮಾಡಲಾಗಿದ್ದು, 6ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸಲು 284 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 7.74 ಲಕ್ಷ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡ 4924 ನಿರುದ್ಯೋಗಿಗಳಿಗೆ 8.42 ಕೋಟಿ ರೂ. ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಇದುವರೆಗೆ ರಾಜ್ಯದಲ್ಲಿ 2742 ಕೋಟಿ ರೂ.ಗಳು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.  

1000730101

ತುಮಕೂರು ನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಲವು ವಾರ್ಡ್ಗಳನ್ನು ಮಾತ್ರ ಅಭಿವೃದ್ಧಿಪಡಿಸಲಾಗಿದ್ದು, ಉಳಿದ ವಾರ್ಡುಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರಲ್ಲದೆ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗೊಲ್ಲರಹಟ್ಟಿ, ಲಂಬಾಣಿತಾಂಡ, ಕಾಲೋನಿ ಸೇರಿದಂತೆ ದಾಖಲೆರಹಿತ ಜನವಸತಿ ಪ್ರದೇಶ ಗಳಲ್ಲಿ ವಾಸಿಸುವ ದುರ್ಬಲ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲು 2,000 ಹಕ್ಕು ಪತ್ರಗಳನ್ನು ಈ ಕಾರ್ಯಕ್ರಮದ ಮೂಲಕ ವಿತರಿಸಲಾಗಿದೆ. ಜಿಲ್ಲೆಯಲ್ಲಿ 522 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು 520 ಪ್ರಾಥಮಿಕ ಹಾಗೂ 450 ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...