ತುಮಕೂರು | ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರು: ಸಿಎಂ ಜೊತೆ ಚರ್ಚಿಸಿ, ನಿರ್ಧಾರ

Date:

ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೆ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು‌ ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸಚಿವ ಸೋಮಣ್ಣನವರೂ ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ರಾಜ್ಯ ಸರ್ಕಾರದಿಂದ ಯಾವುದೇ ರೀತಿ ವಿಳಂಬವಾಗಿಲ್ಲ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡುವರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ” ಎಂದರು.

“ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕೇಂದ್ರಕ್ಕೆ ಒತ್ತಾಯ ಮಾಡಿದ್ದೆವು. ಎರಡು ವರ್ಷದ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 5300 ಕೋಟಿ ರೂ. ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದರು. ಕೆಲವು ಕಾರಣಾಂತರಗಳಿಂದ ಅವರು ಅನುದಾನ ಬಿಡುಗಡೆ ಮಾಡಲು ಆಗಿಲ್ಲ. ಆದರೂ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಲು ಮುಂದಾಗಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಪ್ರತಿವರ್ಷ ಹಣ ಬಿಡುಗಡೆ ಮಾಡಲಾಗುತ್ತಿದೆ. ಬರುವ ಜೂನ್‌ ವೇಳೆಗೆ ಅರಸಿಕೆರೆಗೆ ನೀರು ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಎರಡು-ಮೂರು ಕಡೆ ಅರಣ್ಯ ಭೂಮಿಯಿಂದ ಕೊಂಚ ಸಮಸ್ಯೆಯಾಗಿದೆ. ಅದು ಬಗೆಹರಿದರೆ 2026ರ ಜೂನ್‌ಗೆ ತುಮಕೂರಿಗೆ ಎತ್ತಿನಹೊಳೆ ನೀರು ಬರುತ್ತದೆ. ಮುಂದೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹೋಗುತ್ತದೆ” ಎಂದರು.

“ಸದ್ಯ ತುಮಕೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಬುಗುಡನಹಳ್ಳಿ ಕೆರೆಯಲ್ಲಿ ಶೇಖರಣೆ ಮಾಡಿರುವ ನೀರು ಜೂನ್, ಜುಲೈ ತಿಂಗಳವರೆಗೆ ಆಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಹೇಳುತ್ತಿದ್ದಾರೆ. ಮೇ ತಿಂಗಳಲ್ಲಿ ಹೇಮಾವತಿಯಿಂದ ಎರಡು ಟಿಎಂಸಿ ನೀರು ಬಿಡಿಸುವಂತೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಜೊತೆಗೆ ಮಾತನಾಡುತ್ತೇನೆ‌. ಜಿಲ್ಲೆಯ ತಾಲೂಕುಗಳಿಗೆ ಸುಮಾರು 2300 ಕೋಟಿ ರೂ. ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಚಳ್ಳಕೆರೆ, ಕೂಡ್ಲಿಗಿ, ಹಿರಿಯೂರು ಎಲ್ಲಾ ಕಡೆಗೂ ನೀರು ಬರುತ್ತದೆ. ಪಾವಗಡ ತಾಲೂಕಿನ 328 ಹಳ್ಳಿಗಳ ಪೈಕಿ 270 ಹಳ್ಳಿಗಳಿಗೆ ಈಗಾಗಲೇ ನೀರು ಕೊಡುತ್ತಿದ್ದೇವೆ. ಮುಖ್ಯಮಂತ್ರಿಯವರು ಸದ್ಯದಲ್ಲೇ ಉದ್ಘಾಟನೆ ಮಾಡಲಿದ್ದಾರೆ. ಮಧುಗಿರಿ‌ಯ ಕೆಲ ಭಾಗಕ್ಕೆ ನೀರು ಬರಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು | ಮಕ್ಕಳಿಗೆ ಚೈತನ್ಯ ತುಂಬಲು ರಂಗ ಶಿಬಿರ ಸಹಕಾರಿ : ಡಾ. ಗೀತಾ ವಸಂತ

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದ ಕುರಿತು ಮಾತನಾಡಿ, “ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಸೇರಿ 35 ಜನ ಶಾಸಕರು ಬರೆದಿರುವ ಪತ್ರವನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು. ಶಿರಾ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ಅನುಕೂಲವಾಗಲಿದೆ. ಈಗಾಗಲೇ ನೆಲಮಂಗಲ ಹಾಗೂ ಕನಕಪುರ ಭಾಗದಲ್ಲಿ ಸರ್ವೆ ಆಗಿದೆ. ವಿಮಾನ ನಿಲ್ದಾಣ ಮಾಡಲು ಅವರದ್ದೇ ಆದ ಮಾನದಂಡಗಳಿರುತ್ತವೆ. ಅದರಂತೆಯೇ ಶಿಫಾರಸ್ಸು ಮಾಡುತ್ತಾರೆ. ಶಿರಾಗೆ ಸರ್ವೆ ಮಾಡಲು ಬಂದಿಲ್ಲ. ಜಿಲ್ಲೆಯ ವಸಂತನರಸಾಪುರ, ಶಿರಾ ಭಾಗದಲ್ಲಿ ಎಲ್ಲಿಯೇ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ವಿಮಾನ ನಿಲ್ದಾಣ ಯೋಜನೆಯನ್ನು ಯಾರು ಹೈಜಾಕ್ ಮಾಡಲು ಆಗುವುದಿಲ್ಲ. ತಾಂತ್ರಿಕ ಸಾಧ್ಯತೆಗಳ ಮೇಲೆ ನಿರ್ಮಿಸಲಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...