ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಹೊನ್ನಾವರ ತಾಲೂಕಿನ ಗೆರುಸೊಪ್ಪಾ ಬಂಗಾರಮಕ್ಕಿ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಅವರು ಭಾನುವಾರ ಭೇಟಿ ನೀಡಿದರು.
ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಅವರು, ಇಲ್ಲಿನ ಶಕ್ತಿ ದೇವತೆ ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕನ್ನಡಿಗ ಆಟಗಾರನ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ವತಿಯಿಂದ ಅವರಿಗೆ ಗೌರವಪೂರ್ವಕ ಸ್ವಾಗತ ಕೋರಲಾಯಿತು.
ಮಾರುತಿ ಗುರೂಜಿ ಭೇಟಿ: ದೇವ ದರ್ಶನದ ನಂತರ ಕ್ಷೇತ್ರದ ಧರ್ಮದರ್ಶಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರನ್ನು ಭೇಟಿ ಮಾಡಿದ ಕೆ.ಎಲ್. ರಾಹುಲ್, ಕೆಲಕಾಲ ಅವರೊಂದಿಗೆ ಸಮಾಲೋಚನೆ ನಡೆಸಿದರು. ಗುರೂಜಿಯವರಿಂದ ಮಂತ್ರಾಕ್ಷತೆ ಮತ್ತು ಆಶೀರ್ವಾದ ಪಡೆದ ಅವರು, ಕ್ಷೇತ್ರದ ಪ್ರಶಾಂತ ವಾತಾವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಕೆಡಿಪಿ ಸಭೆಯಲ್ಲಿ ಸಚಿವ-ಶಾಸಕರ ನಡುವೆ ತಾರಕಕ್ಕೇರಿದ ವಾಗ್ವಾದ; ಸಭೆಯಿಂದ ಹೊರನಡೆದ ಸತೀಶ್ ಸೈಲ್
ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹತ್ತಿರದಿಂದ ಕಂಡ ಅಭಿಮಾನಿಗಳು ಹಾಗೂ ಭಕ್ತರು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಉತ್ಸುಕರಾಗಿದ್ದರು. ರಾಹುಲ್ ಅವರ ಈ ದಿಢೀರ್ ಭೇಟಿಯು ಬಂಗಾರಮಕ್ಕಿ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತು.





