ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

Date:

ಭಕ್ತರ ಪಾಲಿನ ಶ್ರದ್ಧಾ ಕೇಂದ್ರ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನ ಈಗ ಅರ್ಚಕರ ಜಗಳದ ವೈರಲ್ ವಿಡಿಯೋ ದಿಂದ ಸುದ್ದಿಯಲ್ಲಿಯಿದೆ.

ದೇವಸ್ಥಾನದ ಪವಿತ್ರ ಗರ್ಭಗುಡಿಯ ಮುಂದೆಯೇ ದಕ್ಷಿಣೆ (ಹರಿವಾಣ) ಹಣಕ್ಕಾಗಿ ಅರ್ಚಕರಿಬ್ಬರು ಕಿತ್ತಾಡಿಕೊಂಡಿರುವ ಆಘಾತಕಾರಿ ದೃಶ್ಯಗಳು ಈಗ ಇಡೀ ರಾಜ್ಯದ ಗಮನ ಸೆಳೆದಿವೆ.

ಘಟನೆಯ ವಿವರ: ದೇವಸ್ಥಾನದ ಅರ್ಚಕರುಗಳಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಎಂಬುವವರ ನಡುವೆ ಈ ಸಂಘರ್ಷ ನಡೆದಿದೆ. ಭಕ್ತರು ಹರಿವಾಣಕ್ಕೆ ಹಾಕುವ ಕಾಣಿಕೆ ಹಣದ ಹಂಚಿಕೆ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಪರಸ್ಪರ ತಳ್ಳಾಡಿಕೊಳ್ಳುವ ಹಂತಕ್ಕೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಕ್ತರು ದೈವದರ್ಶನ ಪಡೆಯುತ್ತಿರುವಾಗಲೇ ಅರ್ಚಕರು ಸಾರ್ವಜನಿಕವಾಗಿ ಇಂತಹ ವರ್ತನೆ ತೋರಿರುವುದು ಭಕ್ತ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಘರ್ಷ ಇಂದು ನಿನ್ನೆಯದಲ್ಲ. ಇಡಗುಂಜಿ ದೇವಸ್ಥಾನದ ಪೂಜಾ ಹಕ್ಕು ಹಾಗೂ ಆಡಳಿತಾತ್ಮಕ ಅಧಿಕಾರಕ್ಕಾಗಿ ಅರ್ಚಕರ ಕುಟುಂಬಗಳ ನಡುವೆ ದಶಕಗಳಿಂದಲೂ ಕಾನೂನು ಸಮರ ನಡೆಯುತ್ತಿದೆ. ನ್ಯಾಯಾಲಯದಲ್ಲಿ ಈ ಕುರಿತು ದಾವೆಗಳು ಹೂಡಲ್ಪಟ್ಟಿದ್ದು, ಕುಟುಂಬದ ಒಳಗಿನ ಆಂತರಿಕ ಕಲಹ ಈಗ ದೇವಸ್ಥಾನದ ಘನತೆಗೆ ಧಕ್ಕೆ ತರುತ್ತಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಪರಾಧ ಮುಕ್ತ ಜಿಲ್ಲೆಯತ್ತ ಹೆಜ್ಜೆ; ಕಾನೂನು ಬಾಹಿರ ಚಟುವಟಿಕೆಗಳಿಗೆ ಬಿತ್ತು ಕಡಿವಾಣ!

ಕಾಣಿಕೆ ಹಣದ ಮೇಲಿನ ಹಪಾಹಪಿಯೇ ಈ ಎಲ್ಲಾ ಕಹಿ ಘಟನೆಗಳಿಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ನಡೆದಿದ್ದ ಈ ಘಟನೆಯ ದೃಶ್ಯಗಳನ್ನು ಭಕ್ತರೊಬ್ಬರು ಚಿತ್ರೀಕರಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ.

ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪವಿತ್ರ ಕ್ಷೇತ್ರದಲ್ಲಿ ನಡೆದ ಈ ‘ಅಪವಿತ್ರ’ ವರ್ತನೆಯ ಬಗ್ಗೆ ಭಕ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. “ದೇವರಿಗೆ ನೀಡುವ ಕಾಣಿಕೆಗಾಗಿ ದೇವರ ಸೇವಕರೇ ಹೀಗೆ ಬೀದಿಯಲ್ಲಿ ಜಗಳವಾಡುತ್ತಿರುವುದು ದುರದೃಷ್ಟಕರ” ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...