ಹೊನ್ನಾವರ | ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 236 ಮೆಟ್ರಿಕ್ ಟನ್ ಮರಳು ಜಪ್ತು, 7.2 ಲಕ್ಷ ರೂ. ದಂಡ ವಸೂಲಿ

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಳಕೂರು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಮರಳನ್ನು ಜಪ್ತು ಮಾಡಲಾಗಿದ್ದು, ತಪ್ಪಿತಸ್ಥರಿಂದ ಭಾರೀ ಮೊತ್ತದ ದಂಡವನ್ನು ವಸೂಲಿ ಮಾಡಲಾಗಿದೆ.

ಘಟನೆಯ ವಿವರ: ಬಳಕೂರು ಭಾಗದಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ದೂರು ಜನವರಿ 19ರಂದು ಇಲಾಖೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಭೂ ವಿಜ್ಞಾನಿಗಳ ನೇತೃತ್ವದ ತಂಡವು ಭೂ ವಿಜ್ಞಾನಿಗಳೊಂದಿಗೆ ಅಂದೇ ರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಾವತಿ ನದಿ ತೀರದ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದಾಗ, ಸುಮಾರು 236 ಮೆಟ್ರಿಕ್ ಟನ್ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಪತ್ತೆಯಾಗಿದೆ, ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮರಳನ್ನು ಜಪ್ತು ಪಡಿಸಿಕೊಂಡಿದ್ದಾರೆ. ಅಲ್ಲದೆ, ಜಪ್ತು ಮಾಡಿದ ಮರಳು ಕಳುವಾಗದಂತೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಅಕ್ರಮ ದಾಸ್ತಾನು ಪತ್ತೆಯಾದ ಜಾಗದ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಇಲಾಖೆಯು, ನಿಯಮಾನುಸಾರ ಜನವರಿ 22ರಂದು ಒಟ್ಟು 7.2 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಪಟ್ಟಣ ಪಂಚಾಯತ ವಿರುದ್ಧ ಜಾತಿ ತಾರತಮ್ಯದ ಗಂಭೀರ ಆರೋಪ

ಈ ದಂಡದ ಮೊತ್ತವನ್ನು ಮಾಲೀಕರಿಂದ ಸರ್ಕಾರಕ್ಕೆ ಪಾವತಿಸಿಕೊಳ್ಳುವ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಆಶಾ ಅವರು ಮಾಹಿತಿ ನೀಡಿದ್ದಾರೆ.

ಈ ಕಾರ್ಯಾಚರಣೆಯು ತಾಲೂಕಿನ ಅಕ್ರಮ ಮರಳು ದಂಧೆಕೋರರಲ್ಲಿ ನಡುಕ ಹುಟ್ಟಿಸಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಟ್ಟುನಿಟ್ಟಿನ ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...