ಹೊಸನಗರ | ನಾಗೋಡಿ ಬಳಿ ಬಸ್-ಟಿಪ್ಪರ್ ನಡುವೆ ಅಪಘಾತ

Date:

ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್​ ಅಪಘಾತದ ಘಟನೆ ಬೆನ್ನಲ್ಲೆ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದೆ. ಈ ಘಟನೆ ಹೊಸನಗರ ತಾಲ್ಲೂಕಿನಲ್ಲಿ ಸಂಭವಿಸಿದೆ.

ಹೊಸನಗರ ತಾಲ್ಲೂಕಿನ ನಿಟ್ಟೂರು-ನಾಗೋಡಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿರುವ ಘಟನೆ ಇಲ್ಲಿನ ಶಾಲೆಯೊಂದರ ಬಳಿ ನಡೆದಿದೆ. ಸಾಗರದಿಂದ ಕುಂದಾಪುರದ ಕಡೆಗೆ ಹೊರಟಿದ್ದ ಬಸ್ ಮತ್ತು ನಿಟ್ಟೂರಿನ ಕಡೆಗೆ ಬರುತ್ತಿದ್ದ ರಸ್ತೆ ರೋಲರ್ ತುಂಬಿದ ಟಿಪ್ಪರ್ ಮಧ್ಯೆ ಈ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ. ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...