ಹೊಸನಗರ | ರಿಪ್ಪನ್ ಪೇಟೆಯ ಅಡ್ಡೇರಿ ಸರ್ಕಾರಿ ಶಾಲೆ ಕುಸಿತ

Date:

ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ.

ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ.

ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮುಖ್ಯಶಿಕ್ಷಕರ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪಾಠಕ್ಕೆ ಹಾಜರಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಮಕ್ಕಳಿಗೆ ಓದಲು ಸೂಕ್ತ ಪರಿಸರವೇ ಇಲ್ಲದಂತಾಗಿದೆ. ಪೋಷಕರು ಮತ್ತು ಗ್ರಾಮಸ್ಥರು ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿ, ತುರ್ತು ಆಧಾರದ ಮೇಲೆ ಮಕ್ಕಳಿಗೆ ಸುರಕ್ಷಿತ ತರಗತಿ ಕೊಠಡಿ ಕಲ್ಪಿಸುವಂತೆ ಅಧಿಕಾರಿಗಳಲ್ಲಿ ಒತ್ತಾಯಿಸಿದ್ದಾರೆ.

ಘಟನೆ ನಂತರ ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಗೆ ಶೀಘ್ರದಲ್ಲೇ ಮರುಕಟ್ಟಡ ನಿರ್ಮಾಣ ಮಾಡಬೇಕೆಂದು ಅವರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...