ಹೊಸನಗರ, ಕೊಲ್ಲೂರಿನಿಂದ ಕೊಡಚಾದ್ರಿಯ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.
ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..





