ಹೊಸನಗರ | ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಸಮ: ಸಿಎಂ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಗೂ ಫೇಸ್ಬುಕ್ ಪೋಸ್ಟ್ ಮಾಡಿರುವ ಸಿಎಂ, ‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಎಂದಿದ್ದಾರೆ.

1001994038

ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ’ ಎಂದಿದ್ದಾರೆ.ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

ವಿಶಪ್ರಾಶಣ ಪ್ರಕರಣ ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಪ್ರಕರಣ ಭೇಧಿಸಲು ಮೂರು ತನಿಖಾ ತಂಡಗಳನ್ನು ರಚಿಸಲಾಗಿದೆ. ಈ ಕಾರ್ಯಾಚರಣೆಗೆ ಒಟ್ಟು 18 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

1001994068

ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವ ವಹಿಸಲಿದ್ದಾರೆ.ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಲು ವಿಶೇಷ ತಂಡವನ್ನು ಕಳುಹಿಸಲಾಗಿದೆ.ಟವರ್ ಡಂಪ್‌ ಮತ್ತು ಸಿಸಿ ಟಿವಿ ದೃಶ್ಯಾವಳಿಗಳ ವಿಶ್ಲೇಷಣೆಗಾಗಿ ಐದು ಮಂದಿ ಪೊಲೀಸರನ್ನು ನೇಮಿಸಲಾಗಿದೆ.ಹೂವಿನಕೋಣೆ ಹಾಗೂ ಸುತ್ತಲ ಪರಿಸರದಿಂದ ಮಾಹಿತಿ ಸಂಗ್ರಹಣೆಗಾಗಿ ಎಂಟು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆಗಾಗಿ ಇನ್ನೊಂದು ಐದು ಮಂದಿ ಪೊಲೀಸರ ತಂಡವನ್ನು ರೂಪಿಸಲಾಗಿದೆ.

ಇಂದು ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದು, ಸ್ಥಳೀಯರಿಂದ ಮಾಹಿತಿ ಪಡೆದು ತನಿಖೆಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...