ಹೊಸನಗರ | ಮದ್ಯದ ಅಂಗಡಿ ತೆರವಿಗೆ ಮಹಿಳೆಯರ ಆಗ್ರಹ

Date:

ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮೂಲಕ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರಿಗೆ ಮನವಿ ಸಲ್ಲಿಸಿದರು.

ಎಂಎಸ್‌ಐಎಲ್‌ ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, “ಈ ಗ್ರಾಮಕ್ಕೆ ಒಂದೇ ರಸ್ತೆ ಇದ್ದು, ಗ್ರಾಮಸ್ಥರು ಈ ರಸ್ತೆಯ ಮೂಲಕವೇ ನಡೆದು ಹೋಗಬೇಕಿದೆ. ಮಹಿಳೆಯರು, ಯುವತಿಯರು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಮದ್ಯದಂಗಡಿ ಬಳಿ ಬರುವ ಕೆಲ ಕಿಡಿಗೇಡಿಗಳಿಂದ ಕಿರಿಕಿರಿಯಾಗುತ್ತಿದೆ. ಕೆಲವರು ರೇಗಿಸಿದ್ದುಂಟು. ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಮದ್ಯದಂಗಡಿಯನ್ನು ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

“ಇಲ್ಲಿ ಮದ್ಯ ಖರೀದಿಸಿದ ಮದ್ಯಪ್ರಿಯರು ನಮ್ಮ ಜಮೀನಿನಲ್ಲಿ ಹಾಗೂ ಮನೆಯ ಹಿಂಭಾಗದಲ್ಲಿ ಬಂದು ಮದ್ಯ ಸೇವನೆ ಮಾಡಿ ಬಾಟಲಿಗಳನ್ನು ಮನಸೋಇಚ್ಚೆ ಪುಡಿ ಮಾಡಿ ಗ್ರಾಮದ ಸ್ವಾಸ್ಥ್ಯವನ್ನು ಹಾಳು ಮಾಡುತಿದ್ದು, ಸಂಜೆ 6 ಗಂಟೆಯ ಮೇಲೆ ಮಹಿಳೆಯರು ಮತ್ತು ಮಕ್ಕಳು ಮನೆಯಿಂದ ಹೊರಬರಲು ಆಗದಂತಹ ಸನ್ನಿವೇಶವುಂಟಾಗಿದೆ” ಎಂದು ಅಲವತ್ತುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟುಹಿಡಿದು ಕುಳಿತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿ ಆಲಿಸಿದರು.

1001395772

ಅಬಕಾರಿ ಅಧಿಕಾರಿ ನಾಗರಾಜ್ ಮಾತನಾಡಿ, “ಈ ಸಮಸ್ಯೆಯ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಿತ್ಯವೂ ಈ ಭಾಗದಲ್ಲಿ ಅಬಕಾರಿ ಇಲಾಖೆಯಿಂದ ಬೀಟ್ ವ್ಯವಸ್ಥೆ ಕಲಿಸಿಕೊಡಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? 10.43 ಕೋಟಿ ಮನರೇಗಾ ದಿನಗೂಲಿಗಳ ನೋಂದಣಿ ರದ್ದು; ಬಡವರ ಬದುಕು ಕಸಿದ ಮೋದಿ ಸರ್ಕಾರ

ಪಿಎಸ್‌ಐ ಪ್ರವೀಣ್ ಎಸ್ ಪಿ ಮಾತನಾಡಿ, “ಇಲ್ಲಿನ ಸಮಸ್ಯೆಗಳ ವರದಿಯನ್ನು ಮೇಲಧಿಕಾರಿಗೆ ಕಳುಹಿಸಿಕೊಟ್ಟು ಕ್ರಮಕೈಗೊಳ್ಳಲಾಗುವುದು ಹಾಗೂ ಅಸಭ್ಯವಾಗಿ ವರ್ತಿಸುವವರ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ನಂತರ ಗ್ರಾಮ ಪಂಚಾಯಿತಿಗೆ ತೆರಳಿ ಅಧ್ಯಕ್ಷರು ಹಾಗೂ ಪಿಡಿಒಗೆ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ರವೀಂದ್ರ ಕೆರೆಹಳ್ಳಿ , ಟೀಕಪ್ಪ ಗೌಡ, ಶಾಂತಮ್ಮ, ಜಯಮ್ಮ, ಹೇಮಾವತಿ, ವನಿತಾ, ಮುರುಳಿ ಕೆರೆಹಳ್ಳಿ, ಮಂಜುನಾಥ್ ಗೌಡ, ಸಂತೋಷ್, ಸಚಿನ್ ಗೌಡ, ಅವಿನಾಶ್, ಗಣೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...