ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶ

Date:

ಬಾಗೇಪಲ್ಲಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಆಯೋಜಿಸಿದ್ದ ಈ ಕಾರ್ಯಾಗಾರವು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿರುವುದು ಅತ್ಯಂತ ಸ್ವಾಗತಾರ್ಹ ನೀವು ಇದರ ಸದುಪಯೋಗ ಪಡೆದುಕೊಂಡು, ನಿಮ್ಮ ಕನಸುಗಳ ಕಡೆಗೆ ಹೆಜ್ಜೆ ಹಾಕಿ ಎಂದು ಬಾಗೇಪಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತಾರ್ಣಾಧಿಕಾರಿಗಳಾದ ಆರ್. ಶಿವಪ್ಪ ವಿದ್ಯಾರ್ಥಿಗಳನ್ನು ಕರೆ ನೀಡಿದರು.

ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ಹಾಸ್ಟೆಲ್ ವಿಧ್ಯಾರ್ಥಿ ನಿಲಯದಲ್ಲಿ ಮೂರು ತಿಂಗಳ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದರು ಗ್ರಾಮೀಣ ಭಾಗದ ಬಡ ಹಾಸ್ಟೆಲ್ ವಿದ್ಯಾರ್ಥಿಗಳ ಬೆಳವಣಿಗೆಗೆ ಬೆಂಬಲ ನೀಡುವ ಉದ್ದೇಶದಿಂದ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರವನ್ನು ಉದ್ಘಾಟನೆ ಮಾಡ ಮಾತನಾಡಿದರು.
ಇಂದಿನಿಂದ ಆರಂಭಗೊಂಡು ಮೂರು ಕಾಲ ಕಾರ್ಯಾರವು ನಡೆದಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಅವರು ಹೇಳಿದರು.

ಇಂತಹ ಕಾರ್ಯಾಗಾರಗಳು ಗ್ರಾಮೀಣ ಭಾಗದ ಬಡ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಾರಿದೀಪವಾಗಿ ಮಾರ್ಗದರ್ಶನ ನೀಡುತ್ತವೆ. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ನಮ್ಮ ಇಲಾಖೆ ಕಲ್ಪಿಸುತ್ತದೆ ಎಂದು ಅವರು ಹೇಳಿದರು.

ಪಿಎಸ್​ಐ ಕೆಎಎಸ್ ಐಎಎಸ್ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಟಿಇಟಿ ಬ್ಯಾಂಕಿಂಗ್ ಆರ್​ಆರ್​ಬಿ ಗ್ರಾಮ ಆಡಳಿತಾಧಿಕಾರಿ ಪಿಡಿಒ ಪಿಯು ಮತ್ತು ಡಿಗ್ರಿ ಕಾಲೇಜು ಉಪನ್ಯಾಸಕರು ಎಲ್​ಐಸಿ ಹಾಸ್ಟೆಲ್ ವಾರ್ಡನ್ ಎಸ್​ಎಸ್​ಸಿ ವಿಟಿಯು ಪಿಜಿ ಸಿಇಟಿ ಮತ್ತು ಎಂಎಟಿ ತರಬೇತಿ ನೀಡಲಾಗುತ್ತಿದೆ. ನುರಿತ ಉಪನ್ಯಾಸಕರು, ಸಂಪನ್ಮೂಲ ವ್ಯಕ್ತಿಗಳ ರಿಂದ ಅಭ್ಯರ್ಥಿಗಳನ್ನು ತರಬೇತುಗೊಳಿಸಲಾಗುತ್ತಿದೆ. ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮುನಿರತ್ನಮ್ಮ ಮಾತನಾಡಿ ಪ್ರತಿ ದಿನ ಪತ್ರಿಕೆಗಳನ್ನು ಓದುವುದರ ಜತೆಗೆ ಟಿಪ್ಪಣಿ ಮಾಡುವುದು ಅಂಕಿ- ಅಂಶಗಳು ಘಟನೆಗಳು ಸುದ್ದಿಗಳು ಸಂಪಾದಕೀಯ ಓದುಗರ ಅಂಕಣ ಲೇಖನಗಳು ಪುರವಣಿ ಲೇಖನಗಳು ಇತ್ಯಾದಿ. ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುತ್ತವೆ. ಇದೇ ರೀತಿ ನಿರಂತರ ಓದುವುದರಿಂದ ಪ್ರಚಲಿತ ವಿಷಯದ ಪ್ರಶ್ನೆಗಳಿಗೆ ಉತ್ತರಿಸುವುದು ಸುಲಭ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳ ತರಬೇತಿದಾರ ಶ್ರೀನಿವಾಸ್ ಹಾಗೂ ಜಿ.ವಿ.ಚಂದ್ರಶೇಖರ್ ಮಾತನಾಡಿ
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಯಾವುದೇ ಅಭ್ಯರ್ಥಿ ಸಾಮಾನ್ಯ ಜ್ಞಾನ ಪತ್ರಿಕೆಗೆ ಪರಿಣಾಮಕಾರಿಯಾಗಿ ಸಿದ್ಧವಾಗಲು ದಿನಪತ್ರಿಕೆಗಳ ಓದು ಕಡ್ಡಾಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವವರ ಸಿದ್ಧತೆಗೆ ಒಂದು ನಿರ್ದಿಷ್ಟ ಕ್ರಮವಿದ್ದರೇ ಮಾತ್ರ ಯಶಸ್ಸು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಕೆ ಇಲಾಖೆವತಿ ಯಿಂದ ಉತ್ತಮವಾದ ಸಂಪನ್ಮೂಲ ವ್ಯಕ್ತಿಯನ್ನು ಕರೆಸಿ ಈ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತರಬೇತಿಯನ್ನು ನೀಡುತ್ತಿದ್ದಾರೆ ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ನಿವೃತ್ತ ಯೋಧರಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಪರಿಕರಗಳ ವಿತರಣೆ

ಈ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮೇಲ್ವಿಚಾರಕರಾದ ಎಸ್. ವೆಂಕಟೇಶ್, ಬಿ. ಎಸ್. ಕವಿತ, ರತ್ನಮಾಲ, ಎಂ.ಸಿ. ನರಸಿಂಹಪ್ಪ, ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...