ಕೆಆರ್‌‌ಪೇಟೆ | ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ?

Date:

ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ ನಡೆಸಿರುವ ಘಟನೆ ಕೆಆರ್‌ಪೇಟೆ ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿ ಕಳೆದ ಬುಧವಾರ ರಾತ್ರಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ಪಟ್ಟಣದ ನಿವಾಸಿ ಇಂದ್ರಮ್ಮ ರಂಗನಾಥ ನಿವಾಸದ ಮೇಲೆ ದಾಳಿ ನಡೆಸಲು ಯತ್ನಿಸಿರುವುದು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ರೀತಿಯ ಘಟನೆ ಕೆಆರ್‌ಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಹಾಗೂ ಐ.ಬಿ ವೃತ್ತದ ಬಳಿ ನಡೆದಿದೆ ಎನ್ನಲಾಗಿದೆ. ಚಡ್ಡಿ ಗ್ಯಾಂಗ್ ಮಾದರಿಯಲ್ಲಿಯೇ ಕಳ್ಳರು ಇಂದಿರಾ ರಂಗನಾಥ್ ಮನೆಯ ಬಾಗಿಲನ್ನು‌ ಮುರಿದು ಕಳ್ಳತನ ಮಾಡಲು ಯತ್ನಿಸಿರುವ ಬಗ್ಗೆ ಕೆಆರ್‌ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಘಟನೆಗಳಿಂದಾಗಿ ಕೆಆರ್‌ಪೇಟೆ ಪಟ್ಟಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ನಾಗರಿಕರು ಆತಂಕಗೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಚಡ್ಡಿ ಗ್ಯಾಂಗ್ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವಿಡಿಯೋಗಳು ಹರಿದಾಡುತ್ತಿದ್ದು, ಅವು ಕೆಆರ್‌ಪೇಟೆಯಲ್ಲೇ ನಡೆದಿವೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ಮಂಡ್ಯ ಸಮ್ಮೇಳನ | ಜೋಶಿಯವರು ಗೊ ರು ಚನ್ನಬಸಪ್ಪ, ಜಿ ಮಾದೇಗೌಡರ ಮಾದರಿ ಅರಿಯಲಿ

ಚಡ್ಡಿ ಗ್ಯಾಂಗ್ ಮಾದರಿಯಲ್ಲಿ ಕೆಆರ್‌ಪೇಟೆ ಪಟ್ಟಣದ ಮೂರು ಕಡೆಗಳಲ್ಲಿ ದರೋಡೆಗೆ ಯತ್ನ ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಹೊರ ರಾಜ್ಯಗಳಿಂದ ಬಂದು ಕೆಆರ್‌ಪೇಟೆ ಪಟ್ಟಣದಲ್ಲಿ ನಾನಾ ಕೆಲಸಗಳನ್ನು ಮಾಡುತ್ತಿರುವ ಕಾರ್ಮಿಕರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಇಂದು ನೂರಕ್ಕೂ ಹೆಚ್ಚು ಕಾರ್ಮಿಕರನ್ನು ವಿಚಾರಣೆ ನಡೆಸಿ, ತಮ್ಮ ತಮ್ಮ ರಾಜ್ಯಗಳಿಗೆ ತೆರಳುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

“ಚಡ್ಡಿ ಗ್ಯಾಂಗ್ ಕೆಅರ್‌ಪೇಟೆ ಟೌನ್‌ನಲ್ಲಿ HBT Attempt(House break-in thefts) ಮಾಡಿದ್ದಾರೆ. ಎಲ್ಲರೂ ಸೂಕ್ತ ಮುನ್ನೆಚ್ಚರಿಕೆವಹಿಸಿ” ಎಂದು ಕೆಲ ವಿಡಿಯೋಗಳು ವೈರಲ್ ಆಗಿದ್ದು, ಆ ವಿಡಿಯೋಗಳು ಕೆಆರ್‌‌ಪೇಟೆಗೆ ಸಂಬಂಧಿಸಿದ ವಿಡಿಯೋಗಳು ಅಲ್ಲ. ಅದೊಂದು ಸುಳ್ಳು ಸುದ್ದಿ. ಸಾರ್ವಜನಿಕರು ಇಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...