ನೋಂದಣಿಯಾಗದ RSS ಹೆಸರಲ್ಲಿ ನೂರಾರು ಎಕರೆ ಭೂಮಿ ಹೇಗೆ ತೆಗೆದುಕೊಂಡರು: ಕೆ ಎಂ ರಾಮಚಂದ್ರಪ್ಪ ಪ್ರಶ್ನೆ

Date:

“ಯಾವುದೇ ಪ್ರತಿಭಟನೆಯನ್ನು ಫ್ರೀಡಂ ಪಾರ್ಕ್‌ನಲ್ಲಿ ಮಾಡಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗಿದ್ದಾಗ ಇವರಿಗೆ(ಆರ್‌ಎಸ್‌ಎಸ್‌) ಹೇಗೆ ಅವಕಾಶ ಕೊಡಲಾಯಿತು ಎಂದು ಪಿಐಎಲ್ ಸಲ್ಲಿಸಲಿದ್ದೇವೆ. ಆರ್‌ಎಸ್‌ಎಸ್‌ ಹೆಸರಲ್ಲಿ ನೂರಾರು ಎಕರೆ ಜಾಗ ತೆಗೆದುಕೊಂಡಿದ್ದಾರೆ. ಸಂಘ ನೋಂದಣಿಯಾಗದೆ ಹೇಗೆ ಜಾಗ ಕೊಟ್ಟರು” ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ ಎಂ ರಾಮಚಂದ್ರಪ್ಪ ಪ್ರಶ್ನಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ನಗರದ ಮೌರ್ಯ ಹೋಟೆಲ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ(RSS) ಅವರು ಇಡೀ ದೇಶದಲ್ಲಿ ನಡೆಸುತ್ತಿರುವ ಉಪಟಳ ಮತ್ತು ಧಾರ್ಮಿಕ ಮತಾಂದತೆಯನ್ನು ಒಕ್ಕೊರಲಿನಿಂದ ಖಂಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧ್ಯಮಗಳು ಸತ್ಯವನ್ನು‌ ಬಿತ್ತರಿಸಬೇಕು. ಸತ್ಯದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಆಗಬೇಕು. ಮುಂದಿನ ದಿನದಲ್ಲಿ ನಾವು ಸರ್ಕಾರದ ನಿಲುವಿಗೆ ಬದ್ಧವಾಗಿದ್ದು, ಹೆಚ್ಚಿನ ಹೋರಾಟಗಳನ್ನು ಮಾಡುವವರಿದ್ದೀವಿ” ಎಂದು ಹಿರಿಯ ಹೋರಾಟಗಾರರಾದ ಮಾವಳ್ಳಿ ಶಂಕರ್ ಹೇಳಿದರು.

“ರಾಜ್ಯದೊಳಗಡೆ ಆರ್‌ಎಸ್‌ಎಸ್‌ ಪಥಸಂಚಲನದ ಮೂಲಕ ಉದ್ದೇಶ ಪೂರ್ವಕವಾಗಿ ಗೊಂದಲಗಳನ್ನು ಸೃಷ್ಟಿ ಮಾಡಿದೆ. ಆರ್‌ಎಸ್‌ಎಸ್‌ ಪರಂಪರೆ ಸುಳ್ಳು ಹೇಳುವ ಪರಂಪರೆ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನವನ್ನು ಒಪ್ಪಿಲ್ಲದವರು ಹೇಗೆ ದೇಶಪ್ರೇಮಿಗಳಾಗುತ್ತಾರೆ. ಈ ದೇಶದಲ್ಲಿ ಆರು ಸಾವಿರಕ್ಕೂ ಹೆಚ್ಚು ಜಾತಿಗಳಿದ್ದರೂ, ಬ್ರಾಹ್ಮಣ ಸಮುದಾಯ ಬಿಟ್ಟು ಬೇರೆ ಯಾರೂ ಸರಸಂಘಚಾಲಕರು ಸಿಗಲಿಲ್ಲವೇ” ಎಂದು ವಕೀಲ ಅನಂತ್ ನಾಯ್ಕ್ ಪ್ರಶ್ನಿಸಿದರು.

“ಸರ್ಕಾರದಿಂದ ಯಾವುದಾದರೂ ಭೂಮಿಯನ್ನು ಅಥವಾ ಅನುದಾನವನ್ನು ತೆಗೆದುಕೊಂಡಿದ್ದರೆ, ಎಲ್ಲವೂ ತನಿಖೆ ಮಾಡಬೇಕು. ರಾಜ್ಯದ ಯಾವುದೇ ಮೂಲೆಯಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಡೆದರೆ, ಪರವಾನಗಿ ಪಡೆದಿರಬೇಕು” ಎಂದು ಆಗ್ರಹಿಸಿದರು.

ಹಿರಿಯ ಲೇಖಕಿ ಡಾ. ಬಿ ಟಿ ಲಲಿತಾ ನಾಯಕ್ ಮಾತನಾಡಿ, “ಕತ್ತೆ, ಕುದುರೆ, ಸಂಘಟನೆಗಳು, ಮನುಷ್ಯರಿಗೂ ವಯಸ್ಸಾಗುತ್ತದೆ. ಆದರೆ ಆರ್‌ಎಸ್‌ಎಸ್‌ಗೆ ಆಗಿರುವ ವಯಸ್ಸು ಜನಪರವಲ್ಲ. ಆರ್‌ಎಸ್‌ಎಸ್‌ ಒಂದು‌ ವಿಷವೃಕ್ಷ ಎಂದು ಎ ಕೆ ಸುಬ್ಬಯ್ಯನವರು ಈ ಹಿಂದೆಯೇ ಬರೆದಿದ್ದರು” ಎಂದು ನೆನಪಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...