ಗುಬ್ಬಿ | ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿಯಬೇಕು : ಪಲ್ಲವಿ

Date:

ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ಕಾನೂನು ರೀತಿಯಲ್ಲಿ ತಮಗೆ ದೊರೆಯುವ ಅನುಕೂಲಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕಿ ಪಲ್ಲವಿ ಕರೆ ನೀಡಿದರು.

 ಪಟ್ಟಣದ ಹೊರವಲಯದ ಶ್ರೀ ಚಿದಂಬರಾಶ್ರಮ ಶಾಲೆಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ ಹಾಗೂ ಮಕ್ಕಳ ರಕ್ಷಣಾ ಘಟಕ, ಚಿದಂಬರ ಸೇವಾ ಸದನ ಪ್ರೌಢಶಾಲೆ ಇವರುಗಳ ಸಹಯೋಗದಲ್ಲಿ ದತ್ತು ಮಾಸಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಹೆಣ್ಣು ಮಕ್ಕಳು ದುಷ್ಪರಿಣಾಮಗಳಿಗೆ ಮಾರು ಹೋಗದೆ ಉತ್ತಮ ಮಾರ್ಗದಲ್ಲಿ ಸಾಗಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ವಿದ್ಯಾಭ್ಯಾಸ ಮಾಡುವ ಕಡೆ ಗಮನಹರಿಸಬೇಕು ಎಂದ ಅವರು ವೇಗದ ಜಗತ್ತಿನಲ್ಲಿ ಮಕ್ಕಳು ಬಹುಬೇಗ ಹಾದಿ ತಪ್ಪುವ ಅವಕಾಶ ಹೆಚ್ಚಿದೆ. ಜೊತೆಗೆ ಹದಿಹರೆಯದ ವಯಸ್ಸಿನಲ್ಲಿ ಸಮಾಜಘಾತುಕ ಕೆಲಸಗಳಿಗೆ ಸಿಲುಕುತ್ತಾರೆ. ಈ ಹಿನ್ನಲೆ ಮಕ್ಕಳಿಗೆ ಕಾನೂನು ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕ ಎಚ್.ಜಿ.ಶಶಿಧರ್ ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್, ಟಿವಿ ಇವುಗಳಿಂದ ದೂರವಿದ್ದು ನಿರಂತರ ಅಭ್ಯಾಸದಲ್ಲಿ ತೊಡಗಿದಾಗ ಮಾತ್ರ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ.

 ವಿದ್ಯಾರ್ಥಿ ಜೀವನದಲ್ಲಿ ನಿಗದಿತ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅಭ್ಯಾಸ ಮಾಡಿದರೆ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ. ಈ ಜೊತೆಗೆ ಬದುಕಿನ ಮೌಲ್ಯ ತಿಳಿದು ಜೀವನದ ಪಾಠವನ್ನು ಸಹ ಕಲಿಯಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ 1098, ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ನಿಷೇಧ ಕಾಯ್ದೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚಿದಂಬರಾಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಎ.ಬಿ.ಜಗದೀಶ್, ಸಶಿಕ್ಷಕಿಯರಾದ ಪದ್ಮ , ರಶ್ಮಿ, ಸಹನಾ,ಶಶಿಕಲ ಹಾಗೂ ಆಡಳಿತ ವರ್ಗ ಮತ್ತು ವಿದ್ಯಾರ್ಥಿಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...