ಹುಬ್ಬಳ್ಳಿ | 5 ವರ್ಷದ ಬಾಲಕಿ ಕೊಲೆ; ಪೊಲೀಸ್ ಗುಂಡೇಟಿಗೆ ಆರೋಪಿ ಬಲಿ

Date:

ಭಾನುವಾರ ಬೆಳಿಗ್ಗೆ ವಿಜಯನಗರದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬ ಆರೋಪಿ ಮೇಲೆ ಭಾನುವಾರ ಸಂಜೆ ಹುಬ್ಬಳ್ಳಿಯ ತಾರಿಹಾಳ ಸೇತುವೆ ಬಳಿ ಅಶೋಕನಗರ ಠಾಣಾ ಪೊಲೀಸರ ಗುಂಡೇಟಿಗೆ ಆರೋಪಿ ಮೃತಪಟ್ಟಿದ್ದಾನೆ.

ಮನೆಯಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಅಪಹರಸಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕಿರುಚಿಕೊಳ್ಳುತ್ತಾಳೆ. ಕೊನೆಗೆ ಬಾಲಕಿಯನ್ನು ಕೊಲೆ ಮಾಡಿದ್ದು, ತಗಡಿನ ಶೆಡ್ ಒಂದರಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ತದನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದರು. ಹುಬ್ಬಳ್ಳಿಯ ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಗುಂಡು ಹಾರಿಸಿದ್ದಾರೆ. ಈ ಸಮಯದಲ್ಲಿ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾಗ ಮತ್ತೆ ಹಾರಿಸಿದ ಗುಂಡೇಟಿಗೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ಕೆಲಸ ಮಾಡಿಕೊಂಡು ತಗಡಿನ ಶೆಡ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ಆರೋಪಿ ರಿತೇಶ ಅನ್ನು ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸ್ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹10 ಲಕ್ಷ ಪರಿಹಾರವನ್ನು ನೀಡುವ ಕುರಿತು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...