ಹುಬ್ಬಳ್ಳಿ | ಅಂಬೇಡ್ಕರ್ ಜನ್ಮ ದಿನಾಚರಣೆ; ಎಲ್ಲೆಲ್ಲೂ ಸಂಭ್ರಮ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಬಳಿ‌ ನಡೆಯಿತು. ನಗರದಲ್ಲಿ ಎಲ್ಲೆಲ್ಲೂ ಅಂಬೇಡ್ಕರ್ ಸಂಭ್ರಮ ಎದ್ದು ಕಾಣುತ್ತಿತ್ತು. ಅಂಬೇಡ್ಕರ್ ಘೋಷಣೆಗಳು ಕೇಳುತ್ತಿದ್ದವು. ನಂತರ ಅಂಬೇಡ್ಕರ್ ದ್ವಜದೊಂದಿಗೆ ಬೈಕ್ ರ್ಯಾಲಿ ನಡೆಯಿತು. ನಗರದೆಲ್ಲೆಡೆ ನೀಲಿ ಧ್ವಜಗಳು ರಾರಾಜಿಸುತ್ತಿದ್ದವು.

ಇದೇ ಸಂದರ್ಭದಲ್ಲಿ ಈದಿನ.ಕಾಂ ಹೊರತಂದಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಮಹತ್ವದ ಕೃತಿಗಳ ಸಾರ ಸಂಗ್ರಹ ವಿಶೇಷ ಸಂಚಿಕೆಯನ್ನು ಚಿಂತಕ ತಮ್ಮಣ್ಣ ಮಾದರ ನೇತೃತ್ವ, ಕುಮಾರಣ್ಣ ಪಾಟೀಲ್ ಮತ್ತು ವಿವಿಧ ಸಂಘಟಕರು ಹಾಗೂ ಅಂಬೇಡ್ಕರ್ ಅನುಯಾಯಿಗಳ ಸಹಭಾಗಿತ್ವದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಮೀಮ್ ಮುಲ್ಲಾ, ಗಂಗಾಧರ ಪೆರೂರ, ಶಂಕರ್ ಅಜಮನಿ, ಹನಿಫ್ ಹಿರೂರ್, ಲೋಕೆಶ್ ಚಲವಾದಿ ಇದ್ದರು.

ನಂತರ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಭೇಟಿನೀಡಿ, ವಿಶ್ವದ ಜ್ಞಾನ ಭಂಡಾರ ಪಡೆಯುವ ಮೂಲಕ ತತ್ವಜ್ಞಾನಿ, ವಿಶ್ವಜ್ಞಾನಿ ಆಗಿದ್ದಾರೆ. ಬಾಬಾಸಾಹೇಬರು ಇವತ್ತು ಮನುವಾದಿಗಳಿಗೆ ಅನಿವಾರ್ಯವಾಗಿದ್ದಾರೆ. ಜಾತಿವಾದಿ ಪಕ್ಷಗಳು ಡೊಂಗಿತನದಿಂದ ಅಂಬೇಡ್ಕರ ಅವರನ್ನು ತಲೆಮೇಲೆ ಹೊರುವ ನಾಟಕವಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತದನಂತರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಾಬಾಸಾಹೇಬರ ದೂರದೃಷ್ಟಿ ಕಾರಣದಿಂದ ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿದೆ. ಆದರೆ ಅವರಿಗೆ ಸಿಗಬೇಕಾದ ಸರಿಯಾದ ಮನ್ನಣೆ ಇಂದಿಗೂ ಸಿಗದಿರುವುದು ನೋವಿನ ಸಂಗತಿ ಎಂದರು.

ಮಹಾಪೌರ ರಾಮಪ್ಪ ಬಡಿಗೇರ ಮಾತನಾಡಿ, ಅಂಬೇಡ್ಕರ್ ಅವರು ಜನಿಸಿದ ದಿನವು ಸ್ವಾಭಿಮಾನದ ದಿನವಾಗಿದೆ. ತಾವು ಪಟ್ಟ ನೋವು‌ ಮತ್ತೊಬ್ಬರು ಅನುಭವಿಸಬಾರದು ಎಂಬ ದೃಷ್ಠಿಯಿಂದ ಬಾಬಾಸಾಹೇಬರು ಸಂವಿಧಾನವನ್ನು ನೀಡಿದ್ದಾರೆ ಎಂದು ಹೇಳಿದರು.

ಆಟೋ ಚಾಲಕರ ಸಂಘದ ಅದ್ಯಕ್ಷ ಮಾತನಾಡಿ, ಮುಂಬರುವ ದಿನಗಳಲ್ಲಿ ಎಲ್ಲ ಜಾತಿ ಧರ್ಮಗಳನ್ನು ಒಳಗೊಂಡು ಅಂಬೇಡ್ಕರ್ ಜಯಂತಿ ಮಾಡೋಣ. ಭ್ರಷ್ಟರಾಜಕಾರಿಗಳನ್ನು ದೂರವಿಟ್ಟು ಬಾಬಾಸಾಹೇಬರ ತತ್ವಾದರ್ಶವನ್ನು ಅರಿತುಕೊಳ್ಳಬೇಕಿದೆ ಎಂದರು.

ಇದನ್ನು‌ ಓದಿದ್ದೀರಾ? ಹುಬ್ಬಳ್ಳಿ | 5 ವರ್ಷದ ಬಾಲಕಿ ಕೊಲೆ; ಪೊಲೀಸ್ ಗುಂಡೇಟಿಗೆ ಆರೋಪಿ ಬಲಿ

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮತ್ತು ಪೊಲೀಸ್ ಇಲಾಖೆ, ಪೌರಕಾರ್ಮಿಕರು, ವಿವಿಧ ಪಕ್ಷದ ಮುಖಂಡರು, ನಾಯಕರು, ವಿವಿಧ ಸಂಘಟಕರು, ಅಭಿಮಾನಿಗಳು, ಅನುಯಾಯಿಗಳು, ವಿವಿಧ ಸಮುದಾಯದವರು, ಸರ್ಕಾರಿ ನೌಕರರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದಿದ್ದ, ಮಹಿಳೆಯರು, ಯುವಕರು, ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...