ಹುಬ್ಬಳ್ಳಿ | ಪೊಲೀಸರ ಹೆಸರು ಬರೆದಿಟ್ಟು ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ

Date:

ಬೈಕ್‌ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರು ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರೇ ಕಾರಣವೆಂದು ಬರೆದಿಟ್ಟಿರುವುದು ಕಂಡುಬಂದಿದೆ.

ಹುಬ್ಬಳ್ಳಿಯ ಆನಂದ ನಗರ ನಿವಾಸಿ ಮಹಾಂತೇಶ್‌ ಕಲಾಲ್‌ ಎಂಬವರು ಡೆತ್‌ನೋಟ್‌ನಲ್ಲಿ ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವವರು. ಅವರನ್ನು ಬೈಕ್‌ ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಕಲಾಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು, ನವೆಂಬರ್ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಲಾಗಿತ್ತು. ಆದರೆ, ನವೆಂಬರ್ 22ರಂದು ಪತ್ತೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗಲು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಅವರ ನಿವಾಸವನ್ನು ಸ್ವಚ್ಛಗೊಳಿಸುವಾಗ ಅವರು ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದೆ. “ಪೊಲೀಸರು ತಮ್ಮ ಬಳಿ ಹಣಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡಿದ್ದಾರೆ. ಬೃಂದಾವನ ಲಾಡ್ಜ್​​ಗೆ ನನ್ನನ್ನು ಎಳೆದೊಯ್ದು ಪೊಲೀಸರು ಥಳಿಸಿದ್ದಾರೆ. ನನ್ನ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಮಲ್ಲಿಕಾರ್ಜುನ, ರೇಣು, ದಾನೇಶ್, ಅರುಣ್, ಮಂಜುನಾಥ, ಕುದರಿ ಹಾಗೂ ಗೋವಿಂದ್​ ಕಾರಣ” ಎಂದು ಉಲ್ಲೇಖಿಸಿದ್ದಾರೆ.

ಡೆತ್‌ನೋಟ್‌ ಪತ್ತೆಯಾದ ಬಳಿಕ ಕಲಾಲ್‌ ಸಾವಿನ ಬಗ್ಗೆ ಮಾತನಾಡಿರುವ ಕಲಾಲ್ ಪತ್ನಿ ಪೂಜಾ, “ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ. ನಮಗೆ ನ್ಯಾಯ ಸಿಗಬೇಕು. ಕಲಾಲ್‌ ಸಾವಿಗೆ ಕಾರಣವಾದ ಪೊಲೀಸರನ್ನು ಅಮಾನತ್ತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...