ಹುಬ್ಬಳ್ಳಿ | ಪಾಲಿಕೆ ಆಯುಕ್ತರಿಂದ ದಲಿತ ವಿರೋಧಿ ನೀತಿ ಆರೋಪ; ಪೌರ ಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

Date:

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಪಾಲಿಕೆ ಎದುರು ಪೌರಕಾರ್ಮಿಕರ ಸಂಘವು ಜುಲೈ 19ರಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಇಂದು(ಜುಲೈ 20) ಆಮರಣ ಉಪವಾಸ ಹೋರಾಟದ ಭಾಗವಾಗಿ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ ಮಾತನಾಡಿ, “ಪಾಲಿಕೆ ಆಯುಕ್ತರು ಸೌಜನ್ಯಕ್ಕೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ಅಲ್ಲದೇ, ಪೌರಕಾರ್ಮಿಕರ ಬಗ್ಗೆ ಅವರಿಗೆ ಕಿಂಚಿತ್ತೂ ಕಾಳಜಿ ಇಲ್ಲ. ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದು ಅವಳಿ ನಗರ ಸ್ವಚ್ಛತೆ ಮಾಡುವ ಕಾರ್ಮಿಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನ, ರಾಜ್ಯ ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಆದೇಶಗಳನ್ನು ಧಿಕ್ಕರಿಸಿ ದಲಿತ ಪೌರಕಾರ್ಮಿಕರ ಮೇಲೆ ಶೋಷಣೆ ಹಾಗೂ ದೌರ್ಜನ್ಯ ಮಾಡುತ್ತಿದ್ದಾರೆ. ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ಸ್ಥಳೀಯ ರಾಜಕಾರಣಿಯ ಒತ್ತಡಕ್ಕೆ ಮಣಿದು ಪೌರ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದ್ದಾರೆ. ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಈ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದೆ ಹೋರಾಟ ನಿರತ ಪೌರಕಾರ್ಮಿಕರಿಗೆ ಆಗಬಹುದಾದ ಸಾವು-ನೋವುಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡುತ್ತೇವೆ” ಎಂದರು.

ಖಾಯಂ ಮಾಡಲು ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ 200 ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಪೌರಕಾರ್ಮಿಕರು ನಿವೃತ್ತಿ ಹೊಂದಿರುವ ಪರಿಣಾಮ, 300 ಪೌರಕಾರ್ಮಿಕರ ಕುಟುಂಬಗಳು ಬೀದಿ ಪಾಲಾಗಿದ್ದಾವೆ. ಇದಕ್ಕೆ ಪಾಲಿಕೆಯ ದಲಿತ ವಿರೋಧಿ ನೀತಿ ಕಾರಣವಾಗಿದೆ ಮತ್ತು ರಾಜ್ಯ ಸರ್ಕಾರ ನೇರ ಪಾವತಿಗೆ ಅನುಮೋದನೆ ನೀಡದೆ ಕಳೆದ ಒಂಬತ್ತು  ತಿಂಗಳಿನಿಂದ ಸತಾಯಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ ಅವರು, ಪೌರ ಕಾರ್ಮಿಕರ ಮೇಲೆ ಅಮಾನವೀಯ ಶೋಷಣೆ, ವಂಚನೆ ನಡೆದಿದೆ. ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಒತ್ತಾಯ ಮಾಡುತ್ತೇವೆ ಎಂದು ವಿಜಯ ಗುಂಟ್ರಾಳ ಹೇಳಿದರು.

ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ರಾಜಕಾರಣಿಗಳ ಕೈಗೊಂಬೆಯಾಗಿರುವ ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ನೀಲವ್ವ ಬೆಳವಟಗಿ, ಪಾರವ್ವ ಹೊಸಮನಿ, ರಾಧಾ ಬಾಗಲಾಡ, ರಾಜು ನಾಗರಾಳ, ಪರಶುರಾಮ್ ಕಡಕೋಳ, ಕನಕಪ್ಪ ಕೋಟಬಾಗಿ, ಮದನ್ ಬೀಳಗಿ, ನಾಗೇಶ್ ಚುರಮುರಿ, ಸೋಮು ಮೊರಬದ, ರೇಣುಕಾ ಬೆಳ್ಳಾರಿ, ಶರಣಪ್ಪ ಅಮರಾವತಿ, ದತ್ತಪ್ಪ ಆಪುಸಪೇಟ್, ನಾಗರಾಜ್ ದೊಡ್ಡಮನಿ, ರೇಣುಕಾ ನಾಗರಾಳ, ತಾಯಪ್ಪ ಹಾಳಾಕೇರಿ, ಸುನಿಲ್ ದೊಡ್ಡಮನಿ, ಶರೀಫ್ ಮಸರಕಲ್, ತಾಯಪ್ಪ ಕಾಣೆಕಲ್, ವೆಂಕಟೇಶ್ ಪಾಲವಾಯಿ, ಶಾಂತವ್ವ ಚುರಮುರಿ, ನಾಗಮ್ಮ ಕರೆಪಾತ್, ದೇವಕ್ಕ ಕಟ್ಟಿಮನಿ, ಸುಮಿತ್ರಾ ಕೊಂಡಪಲ್ಲಿ ಮುಂತಾದ ಪೌರಕಾರ್ಮಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...