ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಜಗಳ: 15 ವರ್ಷದ ಬಾಲಕನ ಹತ್ಯೆಗೈದ 6ನೇ ತರಗತಿಯ ವಿದ್ಯಾರ್ಥಿ!

Date:

ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ ನಡೆದಿದೆ.

ಹುಬ್ಬಳ್ಳಿ ಪಟ್ಟಣದ ಗುರುಸಿದ್ದೇಶ್ವರ ನಗರದಲ್ಲಿ ಘಟನೆ ನಡೆದದ್ದು,  6ನೇ ತರಗತಿಯಲ್ಲಿ ಓದುವ ಬಾಲಕ ಮತ್ತು ಹತ್ಯೆಯಾದ 9ನೇ ತರಗತಿಯ ಬಾಲಕನ ನಡುವೆ ಮೇ.12 ಸಂಜೆ 6 ಗಂಟೆ ಸುಮಾರಿಗೆ ಜಗಳವಾಗಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಚೇತನ್‌ಗೆ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸುದ್ಧಿಗಾರರೊಂದಿಗೆ ಮಾತನಾಡಿ, “ಬಾಲಕರಿಬ್ಬರ ನಡುವಿನ ಜಗಳದಿಂದ ಓರ್ವ ಬಾಲಕ ಮನೆಗೆ ಹೋಗಿ ಚಾಕು ತಂದು ಇನ್ನೊಬ್ಬನಿಗೆ ಇರಿದಿದ್ದಾನೆ. ನಂತರ ಚಾಕು ಇರಿದ ಬಾಲಕನ ತಾಯಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಕಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ.‌ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಜೀವನದಲ್ಲೇ ಇಂತಹ ಘಟನೆ ನೋಡಿಲ್ಲ. ಆರನೇ ತರಗತಿ ಬಾಲಕ ಕೊಲೆ ಮಾಡುವಂತಹ ಮನಸ್ಥಿತಿ ಬಂದಿದೆ. ಆತ ನಮ್ಮ ಸೊಂಟದೆತ್ತರಕ್ಕೂ ಇಲ್ಲ” ಎಂದು ದಿಗ್ಧಮೆ ವ್ಯಕ್ತಪಡಿಸಿದ ಪೊಲೀಸ್ ಕಮಿಷನರ್, “ಪೋಷಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೃತ ಬಾಲಕ 8ನೇ ತರಗತಿ ಪಾಸ್ ಆಗಿದ್ದಾನೆ. ಒಬ್ಬನೇ ಮಗ. ತಂದೆ-ತಾಯಿ ರೊಟ್ಟಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಗಾಯದ ತೀವ್ರತೆ ಅಂದಾಜಿಲ್ಲ. ಇದು ಹೃದಯ ವಿದ್ರಾವಕ ಘಟನೆ. ಕೊಲೆ ಮಾಡಿದ ಬಾಲಕನ ಕುಟುಂಬವೂ ಬಡತನದ್ದಾಗಿದೆ. ಕಾರ್ಯವಿಧಾನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬೀದಿ ನಾಯಿಗಳ ದಾಳಿಗೆ ಮಹಿಳೆ ಬಳಿ

ಈ ಘಟನೆಯು ಕಮರಿಪೇಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...