ಹುಬ್ಬಳ್ಳಿ | ಮಾಜಿ ದೇವದಾಸಿಯವರ ಮರು ಸಮೀಕ್ಷೆ ಅವಧಿ; ಡಿ.‌30 ರವರೆಗೆ ವಿಸ್ತರಿಸಲು ಒತ್ತಾಯ

Date:

ಮಾಜಿ ದೇವದಾಸಿಯರ ಮರು ಸಮೀಕ್ಷೆಯ ಅವಧಿಯನ್ನು ಡಿಸೆಂಬರ 30 ರ ತನಕ ವಿಸ್ತರಿಸಬೇಕೆಂದು ಒತ್ತಾಯಿಸಿ, ಸಮತಾ ಸೈನಿಕ ದಳ ಮತ್ತು ಭಾರತೀಯ ಮೂಲನಿವಾಸಿಗಳ ದ್ರಾವಿಡ್ ಒಕ್ಕೂಟ ರಾಜ್ಯ ಸಮೀತಿ ವತಿಯಿಂದ ಹುಬ್ಬಳ್ಳಿ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದರು.

ಮಾಜಿ ದೇವದಾಸಿಯವರ ಮತ್ತು ಸಮೀಕ್ಷೆಯ ಸಾಧಕ ಭಾದಕಗಳ ಬಗ್ಗೆ ಸಮಾಲೋಚನೆ ನಡೆಸಿದ ನಂತರ, ಮರು ಸಮೀಕ್ಷೆಗೆ ಆದೇಶ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (ಸಿ.ಡಿ.ಪಿ.ಓ) ಕಚೇರಿಯಲ್ಲಿ ಫಲಾನುಭವಿಗಳಿಗೆ ಸೆಪ್ಟೆಂಬರ 27 ರ ತನಕ ಅರ್ಜಿಯನ್ನು ಕೊಡಲಾಗಲಿಲ್ಲ. ಜಿಲ್ಲಾ ಮಟ್ಟದ ಸಮಿತಿಗೆ ಈ ಸಮಿಕ್ಷೆಯ ಬಗ್ಗೆ ಯಾವುದೇ ಸರಿಯಾದ ಮಾಹಿತಿ ಈ ವರೆಗೆ ತಲುಪಿಲ್ಲ. ಸಮಿಕ್ಷೆ ವೇಳೆ ಕೇಳುತ್ತಿರುವ ದಾಖಲೆಗಳ ವಿಚಾರದಲ್ಲಿ ಸ್ಪಷ್ಟತೆಯಿಲ್ಲ. ಸಮಿಕ್ಷೆ ನಡೆಸುವ ಬಗ್ಗೆ ಆಗಲೀ ಮಾಜಿ ದೇವದಾಸಿಯರ ಮರು ಸಮಿಕ್ಷೆ ಬಗ್ಗೆಯಾಗಲಿ ಸರಕಾರ ಮಾಜಿ ದೇವದಾಸಿ ಪುರ್ನವಸತಿ ಹೋರಾಟಗಾರರ ಸಂಘಟನೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಸಾಧಕ ಭಾದಕಗಳ ಬಗ್ಗೆ ಚರ್ಚಿಸಬೇಕಾಗಿತ್ತು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಅಪರಿಚಿತ ಮಹಿಳೆಯ ಶವ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಜಿಲ್ಲಾ ಸಮಿಕ್ಷಕರಿಗೆ ಸಮಗ್ರ ಮಾಹಿತಿಯ ಕೊರತೆಯಿದ್ದು, ಅವರಿಗೆ ತರಬೇತಿ ನೀಡಬೇಕಾಗಿತ್ತು. ಸರಕಾರ ಮಾಜಿ ದೇವದಾಸಿಯರ ಮತ್ತು ಸಮಿಕ್ಷೆಗೆ 45 ವರ್ಷ ಮೇಲ್ಪಟ್ಟವರನ್ನು ಮಾತ್ರ ಪರಿಗಣಿಸುವ ನಿರ್ಧಾರವನ್ನು ಕೈಬಿಟ್ಟು 35 ವರ್ಷದವರನ್ನು ಆದಿಯಾಗಿ ಪರಿಗಣಿಸಬೇಕು. ಮರಣ ಹೊಂದಿದ ಮಾಜಿ ದೇವದಾಸಿಯರ ಸಂಬಂಧಿಗಳ ದಾಖಲೆಗಳನ್ನು ಹೊಂದಿಸಿಕೊಳ್ಳಲು ಕಾಲಾವಕಾಶ ಬೇಕಾಗುತ್ತದೆ. ಫಲಾನುಭವಿಗಳ ಅರ್ಜಿಯಲ್ಲಿ ವಂಶವೃಕ್ಷ, ಆದಾಯ, ಮತ್ತು ಜಾತಿ ಪ್ರಮಾಣ ಪತ್ರ, ವಾರಸಾ ಇತ್ಯಾದಿಗಳನ್ನು ಸಲ್ಲಿಸಬೇಕು. ಆದರೆ ಮಾಜಿ ದೇವದಾಸಿಯರು ಅನಕ್ಷರಸ್ಥರಿದ್ದು ಎಲ್ಲಾ ದಾಖಲೆಗಳ ಕ್ರೂಢಿಕರಣಕ್ಕೆ ಸುಮಾರು ದಿನಗಳು ಬೇಕಾಗುತ್ತದೆ. ಮರು ಸಮೀಕ್ಷೆಗೆ ಹೆಚ್ಚಿನ ಕಾಲಾವಕಾಶ ಅಗತ್ಯವಿರುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಚಲವಾದಿ, ಶಂಕರ ಅಜ್ಮನೆ, ಮಂಜುನಾಥ ಕೊಂಡಪಲ್ಲಿ ಸೇರಿದಂತೆ ಸಂಘಟಕರು, ಮಾಜಿ ದೇವದಾಸಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...