ಹುಬ್ಬಳ್ಳಿ | ಮನೆಗಳ ಹಂಚಿಕೆ ಕಾರ್ಯಕ್ರಮ; ಕಟೌಟ್ ಬಿದ್ದು ನಾಲ್ವರಿಗೆ ಗಾಯ

Date:

ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೂ ಮುನ್ನ ವೇದಿಕೆ ಮುಂಭಾಗದ ಕಟೌಟ್‌ ಬಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಕಾಂಗ್ರೆಸ್ ಪಕ್ಷದ ವತಿಯಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಕಟೌಟ್‌ಗಳು ಸುಮಾರು 30–35 ಅಡಿ ಎತ್ತರವಾಗಿದ್ದು, ಅವುಗಳಿಗೆ ಆಧಾರವಾಗಿ ಕಟ್ಟಿಗೆಗಳನ್ನು ಅಳವಡಿಸಲಾಗಿತ್ತು. ಕಟೌಟ್ ಬಿದ್ದ ವೇಳೆ ಕಟ್ಟಿಗೆಗಳು ದೇಹಕ್ಕೆ ಚುಚ್ಚಿ ಗಾಯಗಳಾಗಿವೆ ಎನ್ನಲಾಗಿದೆ.

ಕಟೌಟ್ ಬಿದ್ದ ಸ್ಥಳದಿಂದ ಕೇವಲ ಕೆಲವೇ ಅಡಿಗಳ ದೂರದಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರು ನಿಂತಿದ್ದರು. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...