ಹುಬ್ಬಳ್ಳಿ | ಧರ್ಮದ ಕಾಲಂ’ನಲ್ಲಿ ‘ನವಬೌದ್ಧ’ ಎಂದು ನಮೂದಿಸಲು ಮೂಲನಿವಾಸಿ ದ್ರಾವಿಡ ಒಕ್ಕೂಟ ಕರೆ

Date:

ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಹದ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಸೇರಿಸಬೇಕು. ಈ ವೇಳೆ ಬಲಗೈ ಸಮುದಾಯದ 37 ಉಪಜಾತಿಗೆ ಸೇರಿದವರು ತಮ್ಮ ಉಪಜಾತಿಯನ್ನು ಛಲವಾದಿ ಅಥವಾ ಹೊಲೆಯರು ಎಂದು ನಮೂದಿಸಬೇಕು ಮತ್ತು ಧರ್ಮದ ಕಾಲಂನಲ್ಲಿ ’ನವಬೌದ್ಧ’ ಎಂದು ನಮೂದಿಸಬೇಕು ಎಂದು ಭಾರತೀಯ ಮೂಲ ನಿವಾಸಿ ದ್ರಾವಿಡ ಒಕ್ಕೂಟದ ರಾಜ್ಯ ಸಂಚಾಲಕ ಶಂಕರ್ ಅಜ್ಮನಿ ಹೇಳಿದರು.

ಹುಬ್ಬಳ್ಳಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಕ್ಕಾಗಿ ರಾಜ್ಯ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸಲು‌ ಮುಂದಾಗಿದ್ದು, ಈ ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಇಲ್ಲ. ಧರ್ಮವನ್ನು ನಮೂದಿಸದಿದ್ದರೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ಸೌಲಭ್ಯಗಳು ಕೆಲವು ಉಪಜಾತಿಗಳಿಗೆ ಸಿಗುವುದಿಲ್ಲ. ಹೀಗಾಗಿ ಧರ್ಮದ ಕಾಲಂ ಸೇರಿಸಬೇಕು. ಮತ್ತು ಸಮಾಜದವರು ಜಾತೀಯ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ’ನವಬೌದ್ಧ’ ಎಂದು ನಮೂದಿಸಬೇಕು ಆಗ ಮಾತ್ರ ಶೈಕ್ಷಣಿಕ ಮತ್ತು ರಾಜಕೀಯವಾಗಿ ಸರ್ಕಾರದ ಎಲ್ಲ ಸೌಲಭ್ಯ ಪಡೆಯಲು ಸಾಧ್ಯ ಎಂದರು.

ಸದಾಶಿವ ಆಯೋಗ ಹಾಗೂ ಜೆಸಿ ಮಾಧುಸ್ವಾಮಿ ಆಯೋಗದ ವರದಿಯಲ್ಲಿನ ನ್ಯೂನ್ಯತೆ ಸರಿಪಡಿಸಿ ವೈಜ್ಞಾನಿಕವಾಗಿ ಮಾಹಿತಿ ಸಂಗ್ರಹಿಸಲು ಮೇ 5 ರಿಂದ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ನಡೆಸಲು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರ ಈಗಾಗಲೇ ನಿಯೋಜಿಸಿದೆ. ಪರಿಶಿಷ್ಟ ಜಾತಿಗಳಲ್ಲಿ ಛಲವಾದಿ ಅಂದರೆ; ಬಲಗೈ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಿಖರ ಮಾಹಿತಿ ಗೊತ್ತಾಗಬೇಕಾದರೆ ಎಲ್ಲರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದ್ದು ಸಮೀಕ್ಷೆಯಲ್ಲಿ ಭಾಗವಹಿಸಿದವರು ಆನ್ಲೈನ್ ಮೂಲಕ ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆ ಮಾಡಲು ಮನೆಗೆ ಬಂದಾಗ ಮಾಹಿತಿ ಕೊಡಲು ಸಾಧ್ಯವಾಗದಿದ್ದರೆ; ಅಂಗನವಾಡಿ ಶಿಶುವಿಹಾರಗಳಲ್ಲಿನ ಬೂತ್ ಕಚೇರಿಗೆ ಹೋಗಿ ಮಾಹಿತಿ ಕೊಡಬೇಕು. ಬೇರೆ ರಾಜ್ಯ ವಿದೇಶಗಳಲ್ಲಿ ಇರುವವರು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗಣೇಶ್ ದೊಡ್ಡಮನಿ, ಇಂದೂಮತಿ, ಮಂಜುನಾಥ್ ಗುಡಿಮನಿ, ಫಕೀರಪ್ಪ ಚಲವಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...