ಹುಬ್ಬಳ್ಳಿಯ RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುತ್ತಿಗೆ ಹಾಕಲು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೈ ಕಾರ್ಯಕರ್ತರನ್ನು ಪೊಲೀಸರು ತಡೆದು, ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಪ್ರತಿಭಟನಾಕಾರರು ಮಾತನಾಡುತ್ತಾ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಶ್ಲೀಲವಾಗಿ ಮಾತನಾಡಿ, ಅವ್ರಿಗೆ ಬೆದರಿಕೆ ಹಾಕಿರುವ ಆರ್.ಎಸ್. ಎಸ್ ಸಂಘಟನೆಯ ನಡೆಯನ್ನು ಖಂಡಿಸುತ್ತೇವೆ. ಮತ್ತು ಅವರ ಕಚೇರಿ ಮುಂದೆ ನಾವು ಪ್ರತಿಭಟಿಸುತ್ತೇವೆ. ಪ್ರತಿಭಟನೆ ಮಾಡುವ ಹಕ್ಕನ್ನು ಸಂವಿಧಾನವು ನೀಡಿದೆ. ಹಾಗೂ RSS ಬ್ಯಾನ್ ಮಾಡುವ ವಿಚಾರವಾಗಿ ಯುವ ಕಾಂಗ್ರೆಸ್ ವತಿಯಿಂದ ಬೆಂಬಲ ಸೂಚಿಸುತ್ತೇವೆ ಎಂದರು.
ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಮಾಜಿ ದೇವದಾಸಿಯವರ ಮರು ಸಮೀಕ್ಷೆ ಅವಧಿ; ಡಿ.30 ರವರೆಗೆ ವಿಸ್ತರಿಸಲು ಒತ್ತಾಯ
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಆರ್‌ಎಸ್‌ಎಸ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಸಂದರ್ಭದಲ್ಲಿ ದೇಶದ್ರೋಹಿ ಆರ್.ಎಸ್. ಎಸ್ ಎಂದು ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಮಾರ್ಗ ಮಧ್ಯದಲ್ಲಿ ವಶಕ್ಕೆ ಪಡೆದಿದ್ದಾರೆ.





