ಹುಬ್ಬಳ್ಳಿ | ಪಾಕ್ ವಿರುದ್ಧ ಕೇಂದ್ರ ಸರ್ಕಾರದ ಎಲ್ಲ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲವಿದೆ ಎಂದ ಸಂತೋಷ್ ಲಾಡ್

Date:

ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಸಹ ನಾವು ಅವರ ಜೊತೆ ನಿಲ್ಲಲಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂವಿಧಾನ ಉಳಿಸಿ ಅಭಿಯಾನದಲ್ಲಿ‌ ಮಾತನಾಡಿದ ಅವರು, ಅಂದು ಸೋನಿಯಾ ಗಾಂಧಿ ಸರ್ಕಾರ, ಮನಮೋಹನ್ ಸಿಂಗ್ ಸರ್ಕಾರ 90 ಸಾವಿರ ಕೋಟಿ ಸಬ್ಸಿಡಿ ಕೊಟ್ಟಿದೆ.‌ ಇಂದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 63 ಡಾಲರ್‌ನಲ್ಲಿ ಖರೀದಿ‌ ಮಾಡುತ್ತಿದೆ. ಸಬ್ಸಿಡಿ ಕೊಟ್ಟರೆ ಅಂಬಾನಿ ಬಂಕ್‌ಗಳು ಸ್ಥಗಿತಗೊಳ್ಳುತ್ತವೆ ಎಂಬ ಕಾರಣಕ್ಕೆ ಮೋದಿ ಸರ್ಕಾರ ಸಬ್ಸಿಡಿ ಕೊಡುತ್ತಿಲ್ಲ. ದೇಶದಲ್ಲಿ ಎಲ್ಲಾ ರೀತಿಯಿಂದಾದ ಬೆಲೆ‌ ಏರಿಕೆಗೆ ಪೆಟ್ರೋಲ್, ಡಿಸೇಲ್ ಮೂಲ‌ ಕಾರಣವಾಗಿದೆ.

ಕೇಂದ್ರದಲ್ಲಿ ರಾಹುಲ್ ಗಾಂಧಿಯಾದಿಯಾಗಿ 140 ಕೋಟಿ ದೇಶದ ಜನತೆ ನಿಮ್ಮ ಜೊತೆಗಿದ್ದೇವೆ.‌ ಈ ಕೂಡಲೇ ನಮ್ಮ ದೇಶದ ಮೇಲೆ ದಾಳಿ ನಡೆಸಿದ ಪಾಕಿಸ್ಥಾನದ ಭಯೋತ್ಪಾದಕರ ಮೇಲೆ ದಂಡೆತ್ತಿ ದಾಳಿ ನಡೆಸಿರಿ. ಸೈದ್ಧಾಂತಿಕ ವಿಚಾರ, ವ್ಯತ್ಯಾಸಗಳು ಎಷ್ಟೇ ಇರಲಿ, ದೇಶದ ವಿಷಯದಲ್ಲಿ ಯಾವ ರಾಜಿಯೂ ಇಲ್ಲ. ದೇಶಕ್ಕೆ ವೈರಿಯಾದರೆ ನಮಗೂ ವೈರಿಯೇ. ಪ್ರಧಾನಿ‌ ಮೋದಿಯವರೇ ಹೆದರಬೇಡಿ. ದೇಶದ ವೀರ ಯೋಧರಿಗೆ ನೈತಿಕ ಸ್ಥೈರ್ಯವಾಗಿ ನಾವೆಲ್ಲ ಇರಲಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ದೇಶದ ಜನೆತೆಗೆ ಬೇಕಿರುವುದು ರಕ್ಷಣೆ; ನಿಮ್ಮ ಭಾಷಣವಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಅಭಿಯಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಗೆ ಕೈಜೋಡಿಸಿದ ಧಾರವಾಡ ಜಿಲ್ಲೆಯ ಜನೆತೆಗೆ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸಿಂಗ್ ಸುರ್ಜೇವಾಲಾ, ಉಪ‌ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು, ಮುಖಂಡರು ವೇದಿಕೆ ಮೇಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...