ಹುಬ್ಬಳ್ಳಿ | ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರ ಪಾತ್ರ ಅಪಾರ: ಸತೀಶ್ ಜಾರಕಿಹೊಳಿ

Date:

ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರು ಪ್ರಮುಖ ಪಾತ್ರ ವಹಿಸಿದ್ದಾರೆ‌. ಸರಿಯಾದ ದಿಕ್ಕಿನಲ್ಲಿ ಸಾಗಲು ಅವರ ಮಾರ್ಗದರ್ಶನ ಅವಶ್ಯವಾಗಿದೆ. ಎಲ್ಲರನ್ನೂ ಬೆಸೆಯುವ ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹಳೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ‌ ಹಮ್ಮಿಕೊಂಡಿದ್ದ ಸೂಫಿ ಸಂತರ ಸಮಾವೇಶದಲ್ಲಿ ಮಾತನಾಡಿದ ಅವರು, “ದೇಶ ಸ್ವಾತಂತ್ರ್ಯಗೊಳ್ಳಲು ಎಲ್ಲ ಸಮುದಾಯದವರೂ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ಭಾವೈಕ್ಯ ನೆಲೆಸಲು ನಾವೆಲ್ಲ ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು. ಹಿಂದೂ ಮುಸ್ಲಿಮರು ಒಂದಾಗಿ ಹೋರಾಟ ಮಾಡಿದಾಗ ಯಶಸ್ಸು‌ ಗಳಿಸಲು ಸಾಧ್ಯ. ಅಂಬೇಡ್ಕರ್, ಬಸವೇಶ್ವರರ ಅನುಯಾಯಿಗಳು ಒಂದಾಗಬೇಕು” ಎಂದರು.

ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, “ದೇಶದ ಅಭಿವೃದ್ಧಿಗೆ ಕೋಮು ಸಾಮರಸ್ಯ ಅವಶ್ಯ. ದ್ವೇಷ ಬಿಟ್ಟು ಎಲ್ಲರನ್ನೂ ಪ್ರೀತಿಯಿಂದ ಗೆಲ್ಲಬೇಕು ಎಂಬುದು ಈ ಸಮಾವೇಶದ ಸಂದೇಶವಾಗಿದೆ. ಈ ಭಾಗದ ಅನೇಕ ಸೂಫಿ ಸಂತರು ಕೋಮು ಸೌಹಾರ್ದ ನೆಲೆಸಲು ವಿಶೇಷ ಕೊಡುಗೆ ನೀಡಿದ್ದಾರೆ. ನಾವೆಲ್ಲ ಒಂದು ಎಂಬ ಸಂದೇಶ ಸಾರಿದ್ದಾರೆ. ಅದನ್ನು ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಬ್ರಿಟಿಷರು ಸಮಾಜದಲ್ಲಿ ಜಾತಿ ಬೀಜವನ್ನು ಬಿತ್ತಿದ್ದಾರೆ. ಅದನ್ನು ಕಿತ್ತೊಗೆಯಬೇಕಿದೆ. ಅಧಿಕಾರಕ್ಕಾಗಿ ಯಾರು ಏನು ಬೇಕಾದರೂ ಮಾತನಾಡುತ್ತಾರೆ. ಇಂತಹ ಸಮಾವೇಶದ ಮೂಲಕ ಅಂತವರನ್ನು ನಿಯಂತ್ರಿಸುವ ಕೆಲಸ ಆಗಬೇಕು ಎಂದರು.

ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, “ಜಾತಿ ಧರ್ಮ ನಮ್ಮ ಮನೆಯ ಹೊಸ್ತಿಲ ಒಳಗಿರಬೇಕು. ಮನೆಯಿಂದ ಹೊರಬಂದರೆ ನಾವೆಲ್ಲ ಭಾರತ ದೇಶದ ಸುಪುತ್ರರಂತೆ ಬದುಕಬೇಕು. ಮಾನವರೆಲ್ಲ ಒಂದು ಎಂಬ ಏಕತೆ ಮೂಡಬೇಕು. ದೇಶದಲ್ಲಿ ಸೂಫಿ ಸಂತರು, ಬಸವಾದಿ ಶರಣರು ಬಾರದೇ ಇದ್ದಿದ್ದರೆ ನದಿಗಳಲ್ಲಿ ನೀರಿನ ಬದಲು ರಕ್ತ ಹರಿಯುತ್ತಿತ್ತು. ಅವರೆಲ್ಲ ಭಾವೈಕ್ಯದ ಸಂದೇಶ ಸಾರಿದ್ದಾರೆ. ಸೂಫಿ ಸಂತರು ಎಲ್ಲ ಧರ್ಮಗಳ ಕೊಂಡಿಯಂತೆ ಕೆಲಸ ಮಾಡಿದ್ದಾರೆ. ದ್ವೇಷ ಬಿಡು ಪ‍್ರೀತಿ ಮಾಡು ಎಂಬ ಸಂದೇಶವನ್ನು ಐದು ಶತಮಾನಗಳ ಹಿಂದೆಯೇ ಫಕೀರೇಶ್ವರರು ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ, “ಸಿದ್ಧಾರೂಢರು ನಡೆದಾಡಿದ ನೆಲದಲ್ಲಿ ಹಿಂದೂ ಮುಸ್ಲಿಮರು ಸೌಹಾರ್ದದಿಂದ ಬದುಕುತ್ತಿದ್ದೇವೆ. ಈ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದರು.

ಈ ಸಂದರ್ಭದಲ್ಲಿ ನಾಡಿನ ಎಲ್ಲ ಲಿಂಗಾಯತ ಸ್ವಾಮೀಜಿ, ಸಂತರು, ಸೂಫಿಗಳು, ಇಸ್ಲಾಂ ಧರ್ಮ ಗುರುಗಳು, ಸಚಿವ ರಹೀಂ‌ ಖಾನ್, ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್‌, ಹುಡಾ ಅಧ್ಯಕ್ಷ ಶಾಕೀರ ಸನದಿ, ಕಾಂಗ್ರೆಸ್‌ ಮುಖಂಡ ಜಿ ಎಸ್ ಪಾಟೀಲ, ಅನಿಲಕುಮಾರ ಪಾಟೀಲ, ಇಮ್ರಾನ್ ಯಲಿಗಾರ, ಅಲ್ತಾಫ್ ಕಿತ್ತೂರ, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್, ಪೊಲೀಸ್ ಕಮಿಷನರ್‌ ಎನ್ ಶಶಿಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...