ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಸಿಲಿಂಡರ್ ಸ್ಫೋಟಗೊಂಡು ಮಾಲಾಧಾರಿಗಳು ಸುಟ್ಟು ಹೋಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ 9 ಜನರ ಪೈಕಿ ಇಲ್ಲಿಯವರೆಗೆ 8 ಮಂದಿ ಸಾವಿಗೀಡಾಗಿದ್ದಾರೆ. ಈ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಮೃತಪಟ್ಟು 8 ಮಾಲಾಧಾರಿಗಳಿಗೆ ಪರಿಹಾರ ನೀಡುವಂತೆ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಘೋಷಣೆ ಮಾಡಿದ್ದಾರೆ.
ಈ ವರದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ: ಹೋರಾಟ ಸಮಿತಿ ಸಂಭ್ರಮ
1:30ಕ್ಕೆ ಮಲಗಿದ್ದ ಸಮಯದಲ್ಲಿ ಒಬ್ಬರ ಕಾಲು ಸಿಲಿಂಡರ್ಗೆ ತಗುಲಿದೆ. ದೀಪ ಹಚ್ಚಿಟ್ಟಿದ್ದರಿಂದ ಸಿಲಿಂಡರ್ ಸೋರಿಕೆಯಿಂದ ಸ್ಫೋಟಗೊಂಡು ಬೆಂಕಿ ಆವರಿಸಿ 9 ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಈಗ ಒಬ್ಬ ಬಾಲಕ ಮಾತ್ರ ಬದುಕಿ ಉಳಿದಿದ್ದಾನೆ.





