ಹುಬ್ಬಳ್ಳಿ | ಪಾಲಿಕೆ ವ್ಯಾಪ್ತಿಯಲ್ಲಿ ಐಷಾರಾಮಿ ಸಾರ್ವಜನಿಕ ಶೌಚಾಲಯ ನಿರ್ಮಾಣ

Date:

ಸ್ವಚ್ಛ ಭಾರತ ಮಿಷನ್‌ 2.0ಯೋಜನೆಯಡಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಐಷಾರಾಮಿ (ಆಕಾಂಕ್ಷಿ ಶೌಚಾಲಯ) ಸಾರ್ವಜನಿಕ ಶೌಚಾಲಯ ಹಾಗೂ 18 ಸಾರ್ವಜನಿಕ ಮೂತ್ರಾಲಯ ನಿರ್ಮಾಣವಾಗಲಿದೆ. ಈ ಬಗ್ಗೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾದ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈಗಾಗಲೇ ₹81.08 ಲಕ್ಷದ ಟೆಂಡರ್‌ ಕರೆಯಲಾಗಿದ್ದು, ಇದೇ 30ರಂದು ನಡೆಯಲಿರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಮಹಾನಗರ ಪಾಲಿಕೆ ಅನುದಾನದಲ್ಲಿ ಈ ಶೌಚಾಲಯ ಹಾಗೂ ಮೂತ್ರಾಲಯ ನಿರ್ಮಾಣವಾಗಲಿವೆ. ಧಾರವಾಡದ ಮೀನು ಮಾರುಕಟ್ಟೆ ಬಳಿ ಐಷಾರಾಮಿ ಶೌಚಾಲಯ ನಿರ್ಮಿಸಲು ಸ್ಥಳ ನಿಗದಿಪಡಿಸಲಾಗಿದೆ. ಮೂತ್ರಾಲಯವನ್ನು ಯಾವ್ಯಾವ ಸ್ಥಳದಲ್ಲಿ ನಿರ್ಮಿಸಬೇಕು ಎನ್ನುವ ಕುರಿತು ಪಾಲಿಕೆ ಅಧಿಕಾರಿಗಳು ಸಮೀಕ್ಷೆ ನಡೆಸಿ, 11 ಸ್ಥಳಗಳನ್ನು ಅಂತಿಮಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕ ಮೂತ್ರಾಲಯಗಳಿಲ್ಲದ ಧಾರವಾಡದ ಏಳು ಹಾಗೂ ಹುಬ್ಬಳ್ಳಿಯ 11 ಸ್ಥಳಗಳನ್ನು ಗುರುತಿಸಿ, ಅಂದಾಜು ಪಟ್ಟಿ ಸಿದ್ಧಮಾಡಿದ್ದಾರೆ. ಧಾರವಾಡದ ಮಾಳಮಡ್ಡಿ, ಸಪ್ತಾಪುರ, ಪದ್ಮಾವತಿ ಚಿತ್ರಮಂದಿರ, ನೆಹರೂ ನಗರ, ಕೆಲಗೇರಿ, ಶ್ರೀನಗರ ಹಾಗೂ ಹುಬ್ಬಳ್ಳಿಯ ರಾಜೀವಗಾಂಧಿ ಶಾಲೆ ಹಿಂಭಾಗ, ಟೌನ್‌ಹಾಲ್‌ ಮುಂಭಾಗ, ಹಳೇಹುಬ್ಬಳ್ಳಿ ಸೇತುವೆ ಬಳಿ, ಮಂಟೂರು ಮುಖ್ಯರಸ್ತೆ, ಚನ್ನಪೇಟೆ ಹಾಗೂ ಇತರ ಸ್ಥಳಗಳಲ್ಲಿ ಸಾರ್ವಜನಿಕ ಮೂತ್ರಾಲಯ ನಿರ್ಮಾಣವಾಗಲಿದೆ.

ಇವುಗಳಿಗೆ ಕೇಂದ್ರ ಸರ್ಕಾರ 15.21 ಲಕ್ಷ ರೂ, ರಾಜ್ಯ ಸರ್ಕಾರ 10.14 ಲಕ್ಷ ರೂ ಹಾಗೂ ಮಹಾನಗರ ಪಾಲಿಕೆ 20.74 ಲಕ್ಷ ರೂ, ಒಟ್ಟು 46.08 ಲಕ್ಷ ರೂ, ಅನುದಾನ ನೀಡಲಿದೆ. ಧಾರವಾಡದ ಮೀನು ಮಾರುಕಟ್ಟೆ ಬಳಿ 35 ಲಕ್ಷ ರೂ. ವೆಚ್ಚದ ಐಷಾರಾಮಿ ಶೌಚಾಲಯ ನಿರ್ಮಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ 8.25 ಲಕ್ಷ ರೂ, ರಾಜ್ಯ ಸರ್ಕಾರ 5.50 ಲಕ್ಷ ರೂ. ಹಾಗೂ ಮಹಾನಗರ ಪಾಲಿಕೆ 11.25 ಲಕ್ಷ ರೂ. ಅನುದಾನ ನೀಡಲಿದೆ. ಪಾಲಿಕೆ ಹೆಚ್ಚುವರಿಯಾಗಿ ₹10 ಲಕ್ಷ ವಿನಿಯೋಗಿಸಿ, ಮಾದರಿ ಶೌಚಾಲಯವನ್ನಾಗಿ ನಿರ್ಮಿಸಲು ಯೋಜನೆ ರೂಪಿಸಿದೆ.

ಈ ಶೌಚಾಲಯ ಐಷಾರಾಮಿ ಸ್ನಾನದ ಗೃಹಗಳು, ಟಚ್‌ಲೆಸ್ ಫ್ಲಶಿಂಗ್, ಸ್ತನ್ಯಪಾನ ಕೊಠಡಿಗಳು ಮತ್ತು ಸ್ವಯಂಚಾಲಿತ ಸ್ಯಾನಿಟರಿ ನ್ಯಾಪ್‌ಕಿನ್ ಇನ್ಸಿನರೇಟರ್‌ ಯಂತ್ರ, ವೀಲಿಂಗ್‌ ಚೇರ್‌ ಒಳಗೊಂಡಿರಲಿದೆ. ಇದನ್ನು ‘ಆಕಾಂಕ್ಷೆಯ ಶೌಚಾಲಯ’ ಎಂದು ಕರೆಯಲಾಗುತ್ತದೆ. ಸ್ವಚ್ಛ ಭಾರತ್ ಮಿಷನ್ 2.0 ಭಾಗವಾಗಿ 2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ನಗರಗಳನ್ನು ಬಯಲು ಶೌಚ ಮುಕ್ತಗೊಳಿಸುವುದು ಯೋಜನೆಯ ಉದ್ದೇಶವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...