ಹುಬ್ಬಳ್ಳಿ | ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Date:

ತನ್ನ ಪ್ರೀತಿಗೆ ಯುವತಿಯು ಸಮ್ಮತಿ ನೀಡದ ಕಾರಣ ಧಾರವಾಡ ಜಿಲ್ಲೆಯ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ 25ವರ್ಷದ ಪ್ರವೀಣ ಬೆಟದೂರು ಎಂಬಾತನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಯುವತಿಯನ್ನು ಪ್ರೀತಿಸಲು ಕೇಳುತ್ತಾನೆ. ಇದಕ್ಕೆ ಒಪ್ಪದ ಯುವತಿ ಸೌಮ್ಯವಾಗಿಯೇ ನಾವಿಬ್ಬರೂ ಒಳ್ಳೆಯ ಸ್ನೇಹಿತರು. ನಾನು ಓದುತ್ತಿರುವೆ ಮತ್ತು ಮನೆಯ ಪರಿಸ್ಥಿತಿಯ ಬಗ್ಗೆ ಹಂಚಿಕೊಳ್ಳುತ್ತಾಳೆ. ಇದರಿಂದ ಬೇಸರಗೊಂಡ ಪ್ರವೀಣ ತಡಸ ಗ್ರಾಮದ ತಾಯವ್ವನ‌ ಗುಡಿಯ ಬಳಿ ಬಾಟಲಿಯಲ್ಲಿ ತಂದಿದ್ದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುತ್ತಾನೆ.

ಸ್ಥಳೀಯರು ಧಾವಿಸಿ ಬರುವುದರೊಳಗೆ ಪೂರ್ತಿ ದೇಹವು ಸುಟ್ಟಿದ್ದು ತಕ್ಷಣ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಲ್ಲಿ ಯುವತಿಯ ಯಾವುದೇ ತಪ್ಪು ಇರುವುದಿಲ್ಲ. ಕಾರಣ ಆಕೆಯೂ ಮೊದಲೇ ಸ್ಪಷ್ಟವಾಗಿ ತನ್ನ ವಿಚಾರ ವ್ಯಕ್ತಪಡಿಸಿದ್ದಾಳೆ. ಮತ್ತು ಆಸ್ಪತ್ರೆಯ ವರೆಗೂ ಯುವತಿ ಹೋಗಿದ್ದು, ನಂತರ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ ಮೃತಪಟ್ಟಿದ್ದಾನೆ ಎಂದು ತಡಸ ಪೊಲೀಸ್ ಅಧಿಕಾರಿಗಳು ಈದಿನ.ಕಾಮ್ ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು

ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...