ಹುಬ್ಬಳ್ಳಿ | ಓಲಾ, ಉಬರ್, ರಾಪಿಡೊ, ನಮ್ಮ ಯಾತ್ರಿ ವಿರುದ್ಧ ಆಟೋ ಚಾಲಕರ ಆಕ್ರೋಶ

Date:

ಅವಳಿ ನಗರದಲ್ಲಿ ಅನುಮತಿ ಪಡೆಯದೆ ನಡೆಸುತ್ತಿರುವ ಆ್ಯಪ್ ಕಾರ್ಯಾಚರಣೆ ಆಧಾರಿತ ಆಟೊ, ಟ್ಯಾಕ್ಸಿ, ಬೈಕ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಸೋಮವಾರ ಗಬ್ಬೂರು ಆರ್‌ಟಿಒ ಕಚೇರಿಗೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿ, ಈಗಾಗಲೇ ಶಕ್ತಿ ಯೋಜನೆ, ಇಂಧನ ಬೆಲೆ ಏರಿಕೆ ಮತ್ತಿತರ ಕಾರಣಗಳಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶಾಲೆ ಶುಲ್ಕ ಭರಿಸಲಾಗುತ್ತಿಲ್ಲ. ಸಾಲದ ಕಂತು ತುಂಬಲಾಗುತ್ತಿಲ್ಲ. ಇಂಥ ಸಂದರ್ಭಗಳಲ್ಲಿ ಓಲಾ, ಉಬರ್, ರಾಪಿಡೊ, ನಮ್ಮ ಯಾತ್ರಿ ಮುಂತಾದ ಆ್ಯಪ್‌ಗಳ ಮೂಲಕ ಕೆಲವರು ಅನಧಿಕೃತವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಅವಕಾಶ ಇದ್ದರೆ ಆ್ಯಪ್ ಆಧಾರಿತ ಸೇವೆಗಳಿಗೆ ಅಧಿಕಾರಿಗಳು ಅನುಮತಿ ನೀಡಲಿ. ಅವಳಿ ನಗರದಲ್ಲಿ 20 ಸಾವಿರಕ್ಕೂ ಹೆಚ್ಚು ಆಟೋಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದರು.

ಮನವಿ ಸ್ವೀಕರಿಸಿದ ಆರ್‌ಟಿಓ ಶ್ರೀಕಾಂತ ಬಡಿಗೇರ, ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...