ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ‌ ಇಂದಿರಾ ಕ್ಯಾಂಟೀನ್: ಸ್ಥಳಾಂತರಕ್ಕೆ ಪಾಲಿಕೆ ಆಯುಕ್ತರ ಆದೇಶ

Date:

ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ‌ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ.

ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಶುರುವಾಗಿ ಮುಗಿಯುವ ಹಂತದಲ್ಲಿತ್ತು. ಆ ಸಮಯದಲ್ಲಿ ರುದ್ರಭೂಮಿ ಅಭಿವೃದ್ಧಿ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಇಂದಿರಾ ಕ್ಯಾಂಟೀನ್ ತೆರವುಗೊಳಿಸುವಂತೆ ಮನವಿ‌ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರು ಇಂದಿರಾ ಕ್ಯಾಂಟೀನ್ ಸ್ತಳಾಂತರ ಮಾಡುವಂತೆ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಡ ಹಾಗೂ ಕೂಲಿ ಕಾರ್ಮಿಕರಿಗೆ ಅತೀ ಕನಿಷ್ಠ ಬೆಲೆಗೆ ಊಟ ಹಾಗೂ ಉಪಹಾರವನ್ನು ನೀಡಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟಿನ್‌ ಅನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಹೊಸದಾಗಿ ಎರಡು ಇಂದಿರಾ ಕ್ಯಾಂಟಿನ್‌ಗಳನ್ನು ನಿರ್ಮಿಸಲು 2ನೇ ಜನೆವರಿ 2024ರಂದು ಸರ್ಕಾರದ ಅನುಮೋದನೆ ಪಡೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಕಾಲನಿ, ಮಂಟೂರ ರಸ್ತೆ, ಹುಬ್ಬಳ್ಳಿಯಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟಿನ್‌ನ್ನು ಸ್ಥಳಾಂತರಿಸಲು ಒತ್ತಾಯಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಸೂಚನೆಯ ಮೇರೆಗೆ ಸ್ಮಶಾನ ಭೂಮಿಯಲ್ಲಿ‌ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಸ್ಥಗಿತಗೊಳಿಸಿ, ಬೇರೆಕಡೆಗೆ ಸರ್ಕಾರಿ ಜಾಗೆ ಗುರುತಿಸಿ ಸ್ಥಳಾಂತರ ಮಾಡಲು ಸರ್ಕಾರದ ಅನುಮೋದನೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟಿಸಿದ್ದ ಸಂಘ ಸಂಸ್ಥೆ ಮತ್ತು ರುದ್ರಭೂಮಿ ಅಭಿವೃದ್ಧಿ ಸಮಿತಿ, ಪ್ರಕಟಣೆಯಲ್ಲಿ ಹಿಂದೂಪರ ಸಂಘಟನೆಗಳು‌, ಪಾಲಿಕೆ ಆಯುಕ್ತರಿಗೆ, ಪ್ರತಿಭಟನೆಯಲ್ಲಿ ಕೈಜೋಡಿಸಿದ ವಿವಿಧ ಸಂಘಟಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...