ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

Date:

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠಳಿಗೆ ಚಾಕುವಿನಿಂದ ಇರಿದಿದ್ದಾನೆ.

ಘಟನೆ ನಡೆದ ಕೂಡಲೇ ಆಕೆಯನ್ನ ತಕ್ಷಣವೇ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ  ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೇ, ಚಾಕುವಿನಿಂದ ಇರಿದ ಯುವಕನನ್ನು ಕೂಡಲೇ ಬಂಧಿಸಿರುವುದಾಗಿ ತಿಳಿದುಬಂದಿದೆ. ಚೂರಿ ಇರಿದ ಯುವಕನನ್ನು ಅದೇ ಕಾಲೇಜಿನ ವಿದ್ಯಾರ್ಥಿ ಫಯಾಝ್ ಎಂದು ಗುರುತಿಸಲಾಗಿದೆ. ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

neha

ಹಾಡಹಗಲೇ ಹುಬ್ಬಳ್ಳಿಯಲ್ಲಿ ನಡೆದ ಇಂತಹದೊಂದು ಘಟನೆ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...