ಹುಬ್ಬಳ್ಳಿ | ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ; ಓರ್ವ ವೃದ್ಧ ಗಂಭೀರ

Date:

ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, 10 ಜನ ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿ ಈಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿಧಿಯಲ್ಲಿ ನಡೆದಿದೆ.

ಭಾನುವಾರ ತಡರಾತ್ರಿ 1.30ರ ವೇಳೆ ಈ ಘಟನೆ ಸಂಭವಿಸಿದ್ದು, ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್‌ಐಗೆ ದಾಖಲಿಸಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟಿದ್ದು, 58 ವರ್ಷದ ವೃದ್ಧರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜು ಹರ್ಲಾಪುರ(21), ಸಂಜಯ ಸವದತ್ತಿ(20), ವಿನಾಯಕ ಬಾರಕೇರ(12), ಪ್ರಕಾಶ ಬಾರಕೇರ(42), ಮಂಜು ತೋರದ(22), ಅಜ್ಜಾಸ್ವಾಮಿ(58), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಗಾಯಗೊಂಡವರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಯ್ಯಪ್ಪ ಮಾಲೆ ಧರಿಸಿ ವೃತ ಆಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಮಾಡುತ್ತಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲಿಂಡರ್‌ಗೆ ತಾಗಿ ಉರುಳಿದ ಪರಿಣಾಮ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿ, ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ತಗುಲಿದೆ. ಆಗ ಒಮ್ಮೆಲೆ ದೇವಸ್ಥಾನದ ಪ್ರಾಂಗಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯ್ಯಪ್ಪ ಮಾಲಾಧಾರಿಗಳು ನಿತ್ಯ ಬೆಳಿಗ್ಗೆ ಹಾಗೂ ಸಂಜೆ ಸ್ನಾನ ಮಾಡಲು ನೀರು ಹಾಗೂ ಅಡುಗೆ ಮಾಡಿಕೊಳ್ಳಲು ಸಿಲೆಂಡರ್‌ ಇಟ್ಟುಕೊಂಡಿರುತ್ತಾರೆ. ಬಳಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ವರದಿ ಓದಿದ್ದೀರಾ? ಬೆಳಗಾವಿ | ಆಸ್ತಿಗಾಗಿ ಜಗಳ: ತಮ್ಮನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೈದ ಸಹೋದರ

ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...