ಹುಬ್ಬಳ್ಳಿ | ಪಾಲಿಕೆ ಆಯುಕ್ತರನ್ನು ಬದಲಾಯಿಸುವಂತೆ ಸದಸ್ಯರಿಂದ ಸಿಎಂಗೆ ಪತ್ರ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ ಒಳ್ಳೆ ಐಎಎಸ್​ ಅಧಿಕಾರಿಯನ್ನು ನೇಮಿಸುವಂತೆ ಕೋರಿದ್ದಾರೆ.

“ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ಪಾಲಿಕೆಯನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಯಾವುದೇ ಕೆಲಸ ಮಾಡದೇ ಕಾಲಹರಣ ಮಾಡುತ್ತಿದ್ದಾರೆ. ಪಾಲಿಕೆ ಆಯುಕ್ತರು ನಮ್ಮ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡದೇ ನೋಡೋಣ ನೋಡೋಣ ಎಂದು ಕಾಲ ದೂಡುತ್ತಿದ್ದಾರೆ. ನಾವು ವಾರ್ಡ್​ನಲ್ಲಿ ಜನರಿಂದ ಬೈಸಿಕೊಳ್ಳುತ್ತಿದ್ದೇವೆ. ಹೀಗಾಗಿ ಪಾಲಿಕೆ ಆಯುಕ್ತರನ್ನು ಬದಲಾಯಿಸಿ, ಒಳ್ಳೆ ಅಧಿಕಾರಿಯನ್ನು ಪಾಲಿಕೆಗೆ ನೇಮಿಸಬೇಕು” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅವರು ಪತ್ರದಲ್ಲಿ, “ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಆಯುಕ್ತರಾಗಿ ಇದ್ದಂತಹ ಗೋಪಾಲಕೃಷ್ಣ ಬಿ. ಪಾಲಿಕೆಯಿಂದ ವರ್ಗಾವಣೆಯಾದ ನಂತರ ಸದರಿ ಹುದ್ದೆಗೆ ಆಯುಕ್ತರಾಗಿ ಈಶ್ವರ ಉಳ್ಳಾಗಡ್ಡಿ ಬಂದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಯನ್ನು ಅಲಂಕರಿಸಿದ ನಂತರ ನಾನು ಮತ್ತು ನಮ್ಮ ಪಕ್ಷದ ಹಲವು ಸದಸ್ಯರು, ಮುಖಂಡರು ಈಶ್ವರ ಉಳ್ಳಾಗಡ್ಡಿ ಅವರನ್ನು ಭೇಟಿಯಾಗಿ ಮಹಾನಗರ ಪಾಲಿಕೆಯಲ್ಲಿ ಹೆಚ್ಚು ಆದಾಯ ಕ್ರೋಡೀಕರಣದ ಬಗ್ಗೆ ಹೊಸದಾಗಿ ಟ್ಯಾಕ್ಸಿನಲ್ಲಿ ಹೆಸರುಗಳನ್ನು ದಾಖಲಿಸುವುದು, ಎಲ್‌&ಟಿ ಕಂಪನಿಯವರು ಎಲ್ಲ ವಾರ್ಡಗಳಲ್ಲಿ ಕರ್ತವ್ಯದಲ್ಲಿ ನಿಷ್ಕಾಳಜಿ ಮಾಡುತ್ತಿರುವುದು, ಎಲ್ಲ ವಾರ್ಡಗಳ ಒಳಚರಂಡಿ ವ್ಯವಸ್ಥೆ ಸರಿಪಡಿಸುವುದು, ಸದಸ್ಯರಿಂದ ಸಮರ್ಪಕವಾಗಿ ಸಲಹೆಗಳನ್ನು ತೆಗೆದುಕೊಳ್ಳುವುದು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಯಂ, ನೇರ ವೇತನ ಮತ್ತು ಗುತ್ತಿಗೆ ಪೌರಕಾರ್ಮಿಕರಿಗೆ ಆರೋಗ್ಯ/ಸಲಕರಣಿಗಳ ನೀಡುವುದರ ಬಗ್ಗೆ ಚರ್ಚಿಸಿದೆವು. ಆದರೂ ಅವರು ಕಾಲಹರಣ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಯುಕ್ತರ ಇಂತಹ ಧೋರಣೆಯಿಂದ ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳು ಹಿಂದೆ ಬಿದ್ದಿವೆ. ಅವನ್ನು ಅಭಿವೃದ್ಧಿಪಡಿಸುವಂತೆ ಸ್ಥಳೀಯ ಜನ ವಾರ್ಡ್ ಸದಸ್ಯರಾದ ನಮಗೆ ಪದೇ ಪದೇ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಅನುಭವದ ಕೊರತೆ ಇರುವ ಆಯುಕ್ತರಿಂದ ವಾರ್ಡ ಸದಸ್ಯರು ವಾರ್ಡಿನ ಮತದಾರರಿಂದ ಬೈಯಿಸಿಕೊಳ್ಳುವ ಪರಿಸ್ಥಿತಿ ಉದ್ಭವಗೊಂಡಿದೆ” ಎಂದು ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...