ಹುಬ್ಬಳ್ಳಿ | ಮಾ. 18ಕ್ಕೆ ರಂಗಪಂಚಮಿ: ನಿಷೇಧಾಜ್ಞೆ ಜಾರಿ

Date:

ಮಾರ್ಚ್‌ 18ರಂದು ಹೋಳಿ ಅಂಗವಾಗಿ ರಂಗಪಂಚಮಿ ಆಚರಣೆಯಿದ್ದು, ಆ ದಿವಸ ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆವರೆಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತ ಎನ್‌. ಶಶಿಕುಮಾ‌ರ್ ನಿಷೇಧಾಜ್ಞೆ ಜಾರಿ‌ ಮಾಡಿ ಆದೇಶ ಹೊರಡಿಸಿದ್ದಾರೆ.

ನಗರದ ಕಾಳಮ್ಮನ ಅಗಸಿಯಿಂದ ಡಾಕಪ್ಪ ವೃತ್ತದವರೆಗೆ, ಡಾಕಪ್ಪ ವೃತ್ತದಿಂದ ಕೌಲ್‌ಪೇಟೆ ಕ್ರಾಸ್‌ವರೆಗೆ, ಡಾಕಪ್ಪ ವೃತ್ತದಿಂದ ಹಳೇ ಕೆಇಬಿ ಕಚೇರಿವರೆಗಿನ ಪ್ರದೇಶವನ್ನು ಅತಿಸೂಕ್ಷ್ಮಸ್ಥಳವೆಂದು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಮರಿಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಈ ಮಾರ್ಗದಲ್ಲಿ ಮೆರವಣಿಗೆ, ಬೈಕ್ ರ್ಯಾಲಿ, ವಾಹನಗಳಲ್ಲಿ ಧ್ವನಿವರ್ಧಕ ಬಳಸುವುದು, ಬ್ಯಾನರ್, ಬಂಟಿಂಗ್ಸ್ ಉಪಯೋಗಿಸುವುದು, ಸಭೆ, ಸಮಾರಂಭ ಹಾಗೂ ಐದಕ್ಕಿಂತ ಹೆಚ್ಚು ಮಂದಿ ಸೇರುವುದನ್ನು ನಿಷೇಧ ಮಾಡಿದ್ದಾರೆ. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದನ್ನು ನಿರ್ಬಂಧಿಸಲಾಗಿದ್ದು, ಪ್ರಚೋದನಕಾರಿ ಹಾಡು, ಕೂಗಾಟಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದಾರೆ. ಬೇರೆ ಧರ್ಮಿಯರಿಗೆ ಅವರ ಅನುಮತಿಯಿಲ್ಲದೆ ಬಣ್ಣ ಹಚ್ಚಬಾರದು ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...