ಹುಬ್ಬಳ್ಳಿ | ಮಂಕುತಿಮ್ಮನ ಕಗ್ಗ ಜೀವನದ ಧರ್ಮವನ್ನು ಸಾರುತ್ತದೆ: ಮುರಳಿಧರ ಮಳಗಿ

Date:

ನಮ್ಮ ಜೀವನದ ಪ್ರಸಂಗದಲ್ಲಿ ಯಾವ ರೀತಿ ವರ್ತಿಸಬೇಕು? ಎಂಬುದನ್ನು ಮಂಕುತಿಮ್ಮನ ಕಗ್ಗ ಕಲಿಸುತ್ತದೆ. ಒಟ್ಟಾರೆಯಾಗಿ ಜೀವನದ ಧರ್ಮವನ್ನು ಸಾರುತ್ತದೆ ಎಂದು ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.15 ರ ಸಂಜೆ, ನಗರದ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಏರ್ಪಡಿಸಿದ್ದ ಸುನಂದಾ ರಾಜಶೇಖರ ಹಿರೇಮಠ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ್ದ ಮುರಳಿಧರ ಮಳಗಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಂಕುತಿಮ್ಮನ ಕಗ್ಗದಲ್ಲಿ ಜೀವನದ ಯೋಗವಿದೆ. ಮತ್ತು ಆಧುನಿಕ‌ ಭಗವದ್ಗೀತೆ ಎನಿಸಿಕೊಂಡಿದೆ. ಈ ಕೃತಿಯು ಜನಮಾನಸದಲ್ಲಿ ಮನೆಮಾಡಿದೆ. ಮಾಹಿತಿ ಎನ್ನುವುದು ಜ್ಞಾನವಲ್ಲ. ಪುಸ್ತಕದ ಅರಿವಿಗಿಂತ ಮಸ್ತಕದ ಅರಿವು ಬಲುದೊಡ್ಡದು. ವಿವಿಧತೆಯಿಂದ ಜೀವನದಲ್ಲಿ ಸುಖ ಸಾಧ್ಯವೆಂದು ಡಿವಿಜಿ ಹೇಳಿದ್ದಾರೆ. ಸಮನ್ವತಾಭಾವ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಒಂಟಿತನದ ಬೇಸರ ನಮ್ಮನ್ನು ಕಾಡಬಾರದು ಎಂದರು.

ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎ.ಪಾಟೀಲ್ ಮಾತನಾಡಿ, ಈ ನಿವೃತ್ತ ಸಂಘದಲ್ಲಿ ಎಲ್ಲ ದಿನಾಚರಣೆಗಳನ್ನು ಆಚರಿಸುತ್ತೇವೆ. 60 ವರ್ಷ ದಾಟಿದವರು ಹಿರಿಯ ನಾಗರಿಕರು ಈ ಸಂಘದ ಸದಸ್ಯರಾಗಿರಿ ಎಂದು ವಿನಂತಿಸಿದರು. ಹಿರಿಯ ನಾಗರಿಕರ ಸಂರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಸಂವಿಧಾನವೇ ಹೇಳುತ್ತದೆ. ಆದರೆ; ಅದನ್ನು ಸರ್ಕಾರ ಪರಿಪಾಲಿಸುತ್ತಿಲ್ಲ. ಹೀಗಾಗಿ ಹಿರಿಯ ನಾಗರಿಕರಿಗಾಗಿಯೇ ಸಪರೇಟ್ ಮಿನಿಸ್ಟರ್ ಬಜೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾನಪದ ಕಲಾವಿದೆ ಪ್ರಮೀಳಾ‌ ಜಕ್ಕಣ್ಣವರ ಬೀಸುವ ಕಲ್ಲಿನ ಪದ, ತತ್ವಪದ ಹಾಗೂ ಮೂಲ ಜನಪದ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಕೆ.ಎಸ್.ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಉಪಸ್ಥಿತಿಯಲ್ಲಿದ್ದ ಡಾ.‌ ಲಿಂಗರಾಜ ಅಂಗಡಿ ನಿರೂಪಿಸಿದರು. ಇದೇ ವೇಳೆ ಮುರಳಿಧರ ಮಳಗಿ, ದತ್ತಿದಾನಿ ಸುನಂದಾ ಹಿರೇಮಠ, ಪ್ರಮೀಳಾ ಜಕ್ಕಣ್ಣವರಿಗೆ ಸನ್ಮಾನಿಸಿದರು. ಕಸಾಪ ಹುಬ್ಬಳ್ಳಿ ತಾಲೂಕು ಅಧ್ಯಕ್ಷೆ ವಿದ್ಯಾ ವಂಟಮುರಿ ವಂದಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ; ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವ ಜನ್ನತ್ ನಗರ

ದತ್ತಿ ದಾನಿ ಸುನಂದಾ ಹಿರೇಮಠ, ಗೌರವ ಕಾರ್ಯದರ್ಶಿ ಚನ್ನಬಸಪ್ಪ ಧಾರವಾಡಶೆಟ್ಟರ್, ಗೌರವ ಕಾರ್ಯದರ್ಶಿ ಸಿದ್ದಮ್ಮ ಅಡೆವೆಣ್ಣವರ, ಆರ್ ಎಮ್ ಗೋಗೆರಿ ವೇದಿಕೆ ಮೇಲಿದ್ದರು. ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...