ಹುಬ್ಬಳ್ಳಿ | ಬೆಳ್ಳಂಬೆಳಗ್ಗೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಮೃತ್ಯು

Date:

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.6) ಬೆಳ್ಳಂ ಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ಹಾಸನ ಜಿಲ್ಲೆಯ ಅರಕಲಗೂಡಿನ ಮಣಿಕಂಠ (26), ಪವನ್(23), ಚಂದನ್ (31) ಮತ್ತು ಬೆಂಗಳೂರಿನ ಹರೀಶ್ ಕುಮಾರ್(34) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಳಿಕ ಲಾರಿಯೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

accident 3

ಇನ್ನು ಕಿಮ್ಸ್​ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್​ ಭೇಟಿ ನೀಡಿ, ಶವಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇದನ್ನು ಓದಿದ್ದೀರಾ? ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಲಾಡ್, “ಅನಿರೀಕ್ಷಿತವಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರು ಅಪಘಾತ ಸಂಭವಿಸಿದ ನಂತರ ರಸ್ತೆ ಬದಿ ನಿಂತವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಆಗಿದೆ ಅಂತ ಗೊತ್ತಾಗಿಲ್ಲ. ಮಂಜು ಇತ್ತಾ ಅಂತ ಪರಿಶೀಲನೆ ಮಾಡುತ್ತೇವೆ. ಈ ದುರ್ಘಟನೆ ಸಂಭವಿಸಬಾರದಾಗಿತ್ತು” ಎಂದು ಹೇಳಿದರು.

ಘಟನೆಯ ಬಗ್ಗೆ ಮಾಹಿತಿ ನೀಡಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, “ಇಂದು(ಜ.6) ಮುಂಜಾನೆ ಸುಮಾರು 4ರ ವೇಳೆಗೆ ಮೊದಲು ನಿಂತಿದ್ದ ಒಂದು ಕಾರಿಗೆ ಹಿಂದಿನಿಂದ ಬಂದ ಕ್ರೆಟಾ ಕಾರು ಡಿಕ್ಕಿ ಹೊಡೆದಿತ್ತು. ಅದರಲ್ಲಿ ನಾಲ್ಕು ಮಂದಿಗೆ ಗಾಯಗಳಾಗಿತ್ತು. ಅವರನ್ನು ಕೂಡಲೇ ಆಂಬ್ಯುಲೆನ್ಸ್‌ನ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿಕ್ಕಿ ಹೊಡೆದ ಕ್ರೆಟಾ ಕಾರಿನಲ್ಲಿದ್ದವರು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದರು. ಈ ವೇಳೆ ಬಂದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದವರಿಗೆ ಡಿಕ್ಕಿ ಹೊಡೆದಿದೆ. ಒಟ್ಟು ಐವರು ನಿಂತುಕೊಂಡಿದ್ದರು. ಆ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ನಾಲ್ವರಲ್ಲಿ ಮೂವರು ಹಾಸನ ಜಿಲ್ಲೆಯ ಅರಕಲಗೂಡಿನವರು, ಓರ್ವರು ಬೆಂಗಳೂರಿನವರು. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.

“ಘಟನೆಯ ಬಗ್ಗೆ ಮೃತಪಟ್ಟವರ ಕುಟುಂಬಕ್ಕೆ ಮಾಹಿತಿ ನೀಡಿದ್ದೇವೆ. ಘಟನೆ ಮುಂಜಾನೆ ನಡೆದಿದ್ದರಿಂದ ಈ ಸಂದರ್ಭ ಮಂಜು ಇತ್ತು. ಆದರೂ ಈ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಗೋಪಾಲ ಬ್ಯಾಕೋಡ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...