ಹುಬ್ಬಳ್ಳಿ | ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಃ ಆರಂಭ

Date:

ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ 2024ರ ಫೆಬ್ರುವರಿ 29ರವರೆಗೆ ಹುಬ್ಬಳ್ಳಿಯಿಂದ ಮತ್ತು ನ.30ರಿಂದ 2024ರ ಮಾರ್ಚ್‌ 1ರವರೆಗೆ ಬೆಂಗಳೂರಿನಿಂದ ಸಂಚರಿಸಲಿದೆ. ರೈಲು ಸಂಚಾರದ ಸಮಯ, ನಿಲುಗಡೆ ಮತ್ತು ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪ್ರಯಾಣಿಕರ ಕೊರತೆ ಕಾರಣ ನೀಡಿ ನ.20ರಿಂದ ರೈಲು ಸಂಚಾರ ರದ್ದುಪಡಿಸಲಾಗಿತ್ತು. ರೈಲು ಸಂಚಾರ ರದ್ದುಪಡಿಸಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ಒತ್ತಡಕ್ಕೆ ಮಣಿದು ರೈಲು ಸಂಚಾರ ಆರಂಭಿಸಲಾಗಿದೆ ಎನ್ನುತ್ತಿದ್ದಾರೆ ಪ್ರಯಾಣಿಕರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...