ಹುಬ್ಬಳ್ಳಿ | ನೋಂದಣಿಯಾಗದೇ ರಸ್ತೆ ಮೇಲೆ ಓಡಾಡುತ್ತಿವೆ ವಾಹನಗಳು

Date:

ವಾಹನಗಳು ರಸ್ತೆಗೆ ಇಳಿಯುವ ಮುನ್ನ ಕಡ್ಡಾಯವಾಗಿ ನಂಬರ್‌ ಪ್ಲೇಟ್‌ ಹೊಂದಿರಬೇಕಾದದ್ದು ಕಡ್ಡಾಯ. ಆದರೆ, ಹುಬ್ಬಳ್ಳಿಯಲ್ಲಿ ನೋಂದಣಿಯಿಲ್ಲದ ಬೈಕ್‌, ಕಾರು, ರಿಕ್ಷಾ, ಜೀಪ್‌, ರೋಲರ್‌ ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದು, ಇಂತಹ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ.

ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಹಗಲಿನ ವೇಳೆ ಒಳರಸ್ತೆಗಳಲ್ಲಿ ಹೆಚ್ಚಾಗಿ ಓಡಿಸುತ್ತಾರೆ. ಮುಖ್ಯ ರಸ್ತೆಯಲ್ಲೂ ಕೆಲವರು ಓಡಿಸುತ್ತಾರೆ. ಆದರೆ, ಸಂಚಾರ ಪೊಲೀಸರು ದೂರದಲ್ಲಿ ಕಂಡರೆ, ಅಲ್ಲಿಯೇ ವಾಹನಗಳನ್ನು ತಿರುಗಿಸಿ ಬೇರೆ ಮಾರ್ಗ ಹಿಡಿಯುತ್ತಾರೆ. ಸಿಕ್ಕಿಬೀಳುವ ಕೆಲವರು ದಂಡ ಕಟ್ಟುತ್ತಾರೆ. ಇನ್ನೂ ಕೆಲವರು ನಮ್ಮ ಕಣ್ತಪ್ಪಿಸಿ, ಓಡಿಸುತ್ತಾರೆ. ಅಂತಹ ವಾಹನಗಳು ಬಹುತೇಕ ಸಂದರ್ಭಗಳಲ್ಲಿ ಅಪರಾಧ ಕೃತ್ಯಗಳಿಗೂ ಬಳಕೆಯಾಗುವ ಸಾಧ್ಯತೆ ಇರುತ್ತದೆ’ ಎಂದು ಪೊಲೀಸರು ತಿಳಿಸಿದರು.

‘ಕಳೆದ ವರ್ಷದಿಂದ ವಾಹನಗಳಿಗೆ ಹೆಚ್ಚು ಸುರಕ್ಷಿತ ನೋಂದಣಿ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಕಡ್ಡಾಯಗೊಳಿಸಲಾಗಿದ್ದು, ಡೀಲರ್‌ಗಳು ಅವುಗಳನ್ನು ಅಳವಡಿಸಿಯೇ ಮಾರಬೇಕು. ಶಾಶ್ವತ ನೋಂದಣಿಯಿಲ್ಲದ ವಾಹನಗಳನ್ನು ಮಾರಲು ಅವಕಾಶವಿಲ್ಲ. ಆದರೂ, ಕೆಲವು ಡೀಲರ್‌ಗಳು ಮೊದಲಿನಂತೆಯೇ ವಾಹನಗಳನ್ನು ಮಾರಿರುವ ಆರೋಪಗಳು ಕೇಳಿ ಬಂದಿವೆ. ಈಗಾಗಲೇ ಎಚ್ಚರಿಕೆ ಸಹ ನೀಡಲಾಗಿದೆ’ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಕೆ. ದಾಮೋದರ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಎರಡು-ಮೂರು ವರ್ಷಗಳ ಹಿಂದೆ ಖರೀದಿಸಿದ ಬೈಕ್‌, ಕಾರುಗಳಿಗೆ ಕೆಲವರು ಈವರೆಗೂ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡಿಲ್ಲ. ಇನ್ನು ಕೆಲವರು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಪಡೆದುಕೊಂಡಿದ್ದರೂ ಅಳವಡಿಸಿಕೊಂಡಿಲ್ಲ. ಈಗಾಗಲೇ ಕಾರ್ಯಾಚರಣೆ ನಡೆಸಿ ಮ್ಯಾಕ್ಸಿ ಕ್ಯಾಬ್‌ 3.21 ಲಕ್ಷ, ರೋಡ್‌ ರೋಲರ್‌ 1.34 ಲಕ್ಷ, ಗೂಡ್ಸ್‌ ವಾಹನಕ್ಕೆ 23 ಸಾವಿರ ಸೇರಿದಂತೆ ಐದು ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡಿದ್ದು, ಪೊಲೀಸ್‌ ಇಲಾಖೆ ಜೊತೆ ಸಭೆ ನಡೆಸಿ, ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...