ಹುಬ್ಬಳ್ಳಿ | ಯುವಕನ ಕೊಲೆ ಪ್ರಕರಣ; ಕಾಲಿಗೆ ಗುಂಡಿಕ್ಕಿ ಆರೋಪಿಗಳ ಬಂಧನ

Date:

ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಶಿವರಾಜ್‌ನನ್ನು ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದರು.

ಈ ಕೊಲೆ ಪ್ರಕರಣದ ಆರೋಪಿಗಳಾದ ಸುದೀಪ್ ರಾಯಾಪುರ, ಕಿರಣ್ ಜಟ್ಟಪ್ಪನವರ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇನ್ನುಳಿದ ಆರೋಪಿಗಳನ್ನು ಬಂಧಿಸುವುದಕ್ಕಾಗಿ ಸುದೀಪ್ ಮತ್ತು ಕಿರಣ್‌ ನೆಲೆಸಿದ್ದ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಇಂದು ಮುಂಜಾನೆ ಕರೆದೊಯ್ದ ವೇಳೆ ಅವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ

ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಕೂಡಾ ಗಾಯಗೊಂಡಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...